ಕಾರವಾರ: ಕನ್ನಡ ಸಿನಿಮಾ ‘ಭಾವಪೂರ್ಣ’ಚಿತ್ರೀಕರಣದ ಸಂದರ್ಭದಲ್ಲಿ ಹೆಜ್ಜೇನು ದಾಳಿಯಾಗಿ (Honey Bee Attack) ಇಬ್ಬರು ಲೈಟಿಂಗ್ ಸಹಾಯಕರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕುಸಿದು ಬಿದ್ದ ಘಟನೆ ಉತ್ತರ ಕನ್ನಡ (ಜಿಲ್ಲೆಯ ಅಂಕೋಲ ತಾಲೂಕಿನ ಜಮಗೋಡಿನ ರೈಲ್ವೆ ನಿಲ್ದಾಣ ರಸ್ತೆಯ ಕ್ರಾಸ್ ಬಳಿ ಸೋಮವಾರ ನಡೆದಿದೆ.
ಮಂಡ್ಯ ಮೂಲದ ರಮೇಶ್ ಮತ್ತು ರಾಮು ಹೆಜ್ಜೇನು ಕಡಿತಕ್ಕೊಳಗಾದ ಲೈಟಿಂಗ್ ಸಹಾಯಕರು. ಹೆಜ್ಜೇನು ದಾಳಿ ಮಾಡುತ್ತಲೇ ಸ್ಥಳದಲ್ಲಿದ್ದ ಚಿತ್ರತಂಡದ ಕೆಲಸಗಾರರು, ತಂತ್ರಜ್ಞರು, ನಟರು ಕಾಲ್ಕಿತ್ತಿದ್ದಾರೆ. ಈ ವೇಳೆ ಇಬ್ಬರ ಮೇಲೆ ನೂರಾರು ಜೇನು ನೊಣಗಳು ದಾಳಿ ನಡೆಸಿವೆ. ಇದರಿಂದ ಇಬ್ಬರೂ ಸ್ಥಳದಲ್ಲೇ ಕುಸಿದು ಬಿದ್ದಿದ್ದು, ಅವರಿಗೆ ಇತರರು ಸಹಾಯ ಮಾಡಲೂ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ಇದನ್ನೂ ಓದಿ: ಕೆಜಿಎಫ್ ಮ್ಯೂಸಿಕ್ ಬಳಕೆ – ಕಾಂಗ್ರೆಸ್ ಟ್ವಿಟ್ಟರ್ ಖಾತೆ ಬ್ಲಾಕ್ ಮಾಡುವಂತೆ ಕೋರ್ಟ್ ಆದೇಶ
Advertisement
Advertisement
ಘಟನೆಯ ಬಳಿಕ ಸ್ಥಳೀಯ ಆಟೋ ಚಾಲಕನ ಸಹಾಯದಿಂದ 108ಕ್ಕೆ ಕರೆ ಮಾಡಿದ್ದು, ಗಾಯಾಳುಗಳನ್ನು ರಕ್ಷಿಸಿ ಅಂಕೋಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ರಾಜ್ಯದಲ್ಲಿ ಆಡಳಿತ ಪಕ್ಷವೂ ಇಲ್ಲ, ವಿರೋಧ ಪಕ್ಷವೂ ಇಲ್ಲ: ಸಿಎಂ ಇಬ್ರಾಹಿಂ