ಮಂಡ್ಯ: ಮೇಲುಕೋಟೆಯ (Melukote) ತೊಟ್ಟಿಲುಮಡು ಜಾತ್ರೆಯ (Thottilamadu Jathre) ವೇಳೆ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ಜನ ಭಕ್ತರು ಗಾಯಗೊಂಡು, ಸುಮಾರು 17 ಮಂದಿ ಅಸ್ವಸ್ಥರಾಗಿದ್ದಾರೆ.
ಜಾತ್ರೆಯಲ್ಲಿ ಅಷ್ಟತೀರ್ಥೋತ್ಸವದ ವೇಳೆ ಸಾವಿರಾರು ಭಕ್ತರು ಆಗಮಿಸಿದ್ದರು. ಈ ವೇಳೆ ಜೇನುಗೂಡಿದ್ದ ಮರದ ಸಮೀಪವೇ ಭಕ್ತರು ಕರ್ಪೂರ ಹಚ್ಚಿದ್ದಾರೆ. ಕರ್ಪೂರದ ಹೊಗೆಯಿಂದ ಹೆಜ್ಜೇನು ದಾಳಿ ನಡೆಸಿವೆ. ಇದರಿಂದ ಭಕ್ತರು ದಿಕ್ಕಾಪಾಲಾಗಿ ಓಡಿದ್ದಾರೆ. ಇದನ್ನೂ ಓದಿ: ವಿಚ್ಛೇದನ ತೀರ್ಪಿನ ದಿನವೇ ಪತ್ನಿಗೆ ಮಚ್ಚೇಟು – ಆರೋಪಿ ಅರೆಸ್ಟ್
Advertisement
ಜೇನು ದಾಳಿಗೆ ಒಳಗಾದವರನ್ನು ಪಾಂಡವಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡ 17 ಮಂದಿಯನ್ನು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಗ್ಯಾಸ್ ಗೀಸರ್ ಲೀಕ್‍ನಿಂದ ಪತ್ನಿ ಸಾವು ಎಂದ ಪತಿ- ಕೊಲೆ ಆರೋಪ