ವಿಧಾನಸಭೆಯಲ್ಲಿ ಕೋಲಾಹಲ- ಸ್ಪೀಕರ್‌ ಮೇಲೆ ಪೇಪರ್‌ ಎಸೆತ

Public TV
1 Min Read
Honey trap row disrupts Karnataka vidhan sabha again BJP MLAs storm well of House

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದ ತನಿಖೆಯನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರಿಂದ ತನಿಖೆ ಆಗ್ರಹಿಸಬೇಕೆಂದು ವಿಪಕ್ಷಗಳ ಸದಸ್ಯರು ಇಂದು ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಪೀಕರ್‌ ಖಾದರ್‌ ಮೇಲೆ ಪೇಪರ್‌ ಎಸೆದು ಸಿಟ್ಟು ಹೊರ ಹಾಕಿದರು.

ಇಂದು ವಿಧಾನಸಭೆಯ ಅಧಿವೇಶನದ ಕಡೆಯ ದಿನ. ಹೀಗಾಗಿ ಬೆಳಗ್ಗೆ ವಿಧಾನಸಭೆ ಆರಂಭಗೊಳ್ಳುತ್ತಿದ್ದಂತೆ ಅಶೋಕ್‌ ಮತ್ತು ಸುನಿಲ್‌ ಕುಮಾರ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

ಸರ್ಕಾರದ ಸಚಿವರೇ ತನ್ನ ಮೇಲೆ ಹನಿಟ್ರ್ಯಾಪ್‌ ನಡೆದಿದೆ ಎಂದು ಆರೋಪಿಸಿದ್ದಾರೆ. ಆದರೆ ಸರ್ಕಾರ ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಆಕ್ರೋಶ ಹೊರ ಹಾಕಿದರು.

 

ಜಡ್ಜ್‌ಗಳ ಮೇಲೆ ಹನಿಟ್ರ್ಯಾಪ್‌ ನಡೆದಿದೆ ಎಂದು ರಾಜಣ್ಣ ಹೇಳಿದ್ದಾರೆ. ಹೀಗಾಗಿ ಸರ್ಕಾರ ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ವಿಪಕ್ಷಗಳ ಆಗ್ರಹಕ್ಕೆ ಸಿದ್ದರಾಮಯ್ಯ ಮತ್ತು ಪರಮೇಶ್ವರ್‌ ಅವರು ಈ ಪ್ರಕರಣವನ್ನುಗಂಭೀರವಾಗಿ ಸ್ವೀಕರಿಸಿ ಉನ್ನತ ಮಟ್ಟದ ತನಿಖೆ ನಡೆಸುತ್ತೇವೆ ಎಂದು ತಿಳಿಸಿದರು.

ನಂತರ ಸಿದ್ದರಾಮಯ್ಯ ನವರು ಬಜೆಟ್‌ ಭಾಷಣಕ್ಕೆ ಉತ್ತರ ನೀಡಲು ಆರಂಭಿಸಿರು. ಈ ವೇಳೆ ವಿಪಕ್ಷ ಸದಸ್ಯರು ಬಾವಿಗೆ ಇಳಿದು ಪ್ರತಿಭಟಿಸಿದರು. ವಿಪಕ್ಷಗಳ ಪ್ರತಿಭಟನೆಗೆ ಕ್ಯಾರೇ ಎನ್ನದ ಸಿಎಂ ತಮ್ಮ ಭಾಷಣವನ್ನು ಮುಂದುವರಿಸಿದರು.

ಸಿಎಂ ಭಾಷಣದ ಬಳಿಕ ಸರ್ಕಾರ ಹಲವು ಮಸೂದೆಗಳಿಗೆ ಅಂಗೀಕಾರವನ್ನು ಪಡೆದುಕೊಂಡಿತು. ಈ ಸಂದರ್ಭದಲ್ಲಿ ಬಿಜೆಪಿ ಸದಸ್ಯರು ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಮಸೂದೆಗಳ ಪ್ರತಿಯನ್ನು ಸ್ಪೀಕರ್‌ ಮೇಲೆ ಎಸೆದು ಸಿಟ್ಟು ಪ್ರದರ್ಶಿಸಿದರು. ಗದ್ದಲ ಜಾಸ್ತಿ ಆಗುತ್ತಿದ್ದಂತೆ ಖಾದರ್‌ ಕಲಾಪವನ್ನು ಮುಂದಕ್ಕೆ ಹಾಕಿದರು.

Share This Article