ಚಾಮರಾಜನಗರ: ಶವಸಂಸ್ಕಾರಕ್ಕೆ (Cremation) ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ (Honeybee Attack) ನಡೆಸಿ ಓರ್ವ ಮೃತಪಟ್ಟಿರುವ ಘಟನೆ ಚಾಮರಾಜನಗರ (Chamarajanagara) ಜಿಲ್ಲೆಯ ಕೊಳ್ಳೇಗಾಲ (Kollegala) ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಚೆನ್ನಪ್ಪ (60) ಎಂಬವರು ಮೃತಪಟ್ಟಿದ್ದು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೊಂಗರಹಳ್ಳಿ ಗ್ರಾಮದಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದರು. ಈ ಹಿನ್ನೆಲೆ ಕುಟುಂಬಸ್ಥರು ಸ್ಮಶಾನದಲ್ಲಿ ಶವಕ್ಕೆ ಪೂಜೆ ಸಲ್ಲಿಸಿ ಬೆಂಕಿ ಹಚ್ಚುತ್ತಿದ್ದಂತೆ ಮರದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ಗುಂಪು ದಾಳಿ ಮಾಡಿವೆ. ಇದನ್ನೂ ಓದಿ: ತುಂಗಾ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು
ಈ ಪೈಕಿ ಚೆನ್ನಪ್ಪ ಅವರು ಹೆಜ್ಜೇನು ದಾಳಿಗೆ ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಅಸುನೀಗಿದ್ದಾರೆ. ಉಳಿದ 10 ಮಂದಿ ಹೋಲಿ ಕ್ರಾಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಪೈಕಿ ಒಬ್ಬರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಮೇಲೆ ಮತ್ತೊಂದು FIR – ಸನಾತನ ಧರ್ಮ ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆ
Web Stories