ಶಿಲ್ಲಾಂಗ್: ಹನಿಮೂನ್‌ನಲ್ಲಿ ಪತಿಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯರಾತ್ರಿ ಹಂತಕಿ ಸೋನಮ್‌ನ್ನು ಪೊಲೀಸರು ಮೇಘಾಲಯಕ್ಕೆ (Meghalaya) ಕರೆತರಲಿದ್ದಾರೆ.
ಸದ್ಯ ಈಗ ಸೋನಮ್ ಕೋಲ್ಕತ್ತಾದಲ್ಲಿ (Kolkatta) ಇದ್ದು ವಿಮಾನದ ಮೂಲಕ ಮೇಘಾಲಯ ಪೊಲೀಸರು ಶಿಲ್ಲಾಂಗ್‌ಗೆ (Shillong) ಕರೆತರುತ್ತಿದ್ದಾರೆ.ಇದನ್ನೂ ಓದಿ: ಲವ್ವರ್ ಜೊತೆಯೇ ಓಡಿ ಹೋಗಬಹುದಿತ್ತು, ನನ್ನ ಅಣ್ಣನನ್ನು ಯಾಕೆ ಕೊಂದ್ಲು?- ಹತ್ಯೆಯಾದ ರಘುವಂಶಿ ಸಹೋದರಿ ಕಣ್ಣೀರು
ಇಂದೋರ್ ಮೂಲದ ರಾಜಾ ರಘುವಂಶಿ ಕೊಲೆ ಪ್ರಕರಣ ಸದ್ಯ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ. ಬಾ ನಲ್ಲೆ ಮಧುಚಂದ್ರಕೆ ಸಿನಿಮಾ ರೀತಿಯಲ್ಲಿ ಹನಿಮೂನ್‌ಗೆ ಕರೆದೊಯ್ದು ಪತಿಯನ್ನು ಹತ್ಯೆಗೈದ ಆರೋಪಿ ಪತ್ನಿ ಸೋನಂ ರಘುವಂಶಿಯ ಕರಾಳ ಮುಖಗಳು ಒಂದೊಂದಾಗಿ ಬಹಿರಂಗವಾಗುತ್ತಿದೆ.
ಕೊಲೆ ಬಳಿಕ ವಾರಣಾಸಿಯ ಡಾಬಾವೊಂದರ ಬಳಿ ಸೋನಮ್‌ನ್ನು ಪೊಲೀಸರು ಬಂಧಿಸಿದ್ದರು. ವೈದ್ಯಕೀಯ ಪರೀಕ್ಷೆ ನಂತರ ಉತ್ತರ ಪ್ರದೇಶ ಪೊಲೀಸರು ಆಕೆಯನ್ನು ಮೇಘಾಲಯ ಪೊಲೀಸರಿಗೆ ಹಸ್ತಾಂತರಿಸಿದ್ದರು. ಮಂಗಳವಾರ ಬೆಳಿಗ್ಗೆ ಮೇಘಾಲಯ ಪೊಲೀಸರು ಆಕೆಯನ್ನು ಬಿಹಾರದ ಪಾಟ್ನಾದ ಫುಲ್ವರಿ ಷರೀಫ್ ಠಾಣೆಗೆ ಕರೆತಂದಿದ್ದು, ಮಂಗಳವಾರ ಮಧ್ಯರಾತ್ರಿ ಮೇಘಾಲಯ ತಲುಪಲಿದ್ದಾರೆ.
ಇನ್ನುಳಿದ ನಾಲ್ವರು ಆರೋಪಿಗಳಾದ ಆಕಾಶ್ ರಜಪೂತ್, ವಿಶಾಲ್ ಸಿಂಗ್ ಚೌಹಾಣ್, ರಾಜ್ ಸಿಂಗ್ ಕುಶ್ವಾಹ ಹಾಗೂ ಆನಂದ್‌ನನ್ನು ಹೆಚ್ಚಿನ ತನಿಖೆಗಾಗಿ ಶಿಲ್ಲಾಂಗ್‌ಗೆ ಕರೆದೊಯ್ದಿದ್ದಾರೆ.ಇದನ್ನೂ ಓದಿ: `ನಾ ವಿಧವೆಯಾಗ್ತೀನಿ, ನಿನ್ನನ್ನೇ ಮದ್ವೆಯಾಗ್ತೀನಿ’ ಅಂದಿದ್ಳಂತೆ ಸೋನಂ ರಘುವಂಶಿ..!
ಏನಿದು ಪ್ರಕರಣ?
ಇಂದೋರ್ (Indore) ಮೂಲದ ರಾಜಾ ರಘುವಂಶಿ ಮತ್ತು ಸೋನಮ್ ಕಳೆದ ಮೇ 11ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನವದಂಪತಿ ಮೇ 20ರಂದು ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ್ದರು. ಶಿಲ್ಲಾಂಗ್‌ನ ಬಾಲಾಜಿ ಅತಿಥಿಗೃಹದಲ್ಲಿ ಉಳಿದುಕೊಂಡಿದ್ದ ಅವರು ಮೇ 22ರ ಬೆಳಗ್ಗೆ ದ್ವಿಚಕ್ರ ವಾಹನವೊಂದನ್ನು ಬಾಡಿಗೆ ಪಡೆದು ಅತಿಥಿ ಗೃಹದಿಂದ ಜನಪ್ರಿಯ ಪ್ರವಾಸಿ ತಾಣ ಸೊಹ್ರಾಕ್ಕೆ ತೆರಳಿದ್ದರು. ಈ ವೇಳೆ ಅವರು 2 ಲಗೇಜ್ ಬ್ಯಾಗ್ ತಮ್ಮೊಂದಿಗೆ ತೆಗೆದುಕೊಂಡಿದ್ದರು. ಮೇ 25ರೊಳಗೆ ಹಿಂತಿರುಗುವುದಾಗಿ ಅತಿಥಿ ಗೃಹದ ವ್ಯವಸ್ಥಾಪಕರಿಗೆ ತಿಳಿಸಿದ್ದರು. ಮೇ 23ರಂದು ಮೌಲಾಖಿಯಾತ್ ಗ್ರಾಮ ತಲುಪಿದ ದಂಪತಿ, ನೊಂಗ್ರಿಯಾಟ್‌ನ ಶಿಪಾರಾ ಹೋಂಸ್ಟೇಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಬಳಿಕ ದಂಪತಿ ನಿಗೂಢವಾಗಿ ನಾಪತ್ತೆಯಾಗಿದ್ದರು. ಇದಾದ 1 ದಿನದ ಬಳಿಕ ಅವರು ಬಾಡಿಗೆಗೆ ಪಡೆದಿದ್ದ ಸ್ಕೂಟಿ ಸೊಹ್ರಾರಿಮ್ ಬಳಿ ಪತ್ತೆಯಾಗಿತ್ತು. 11 ದಿನಗಳ ಹುಟುಕಾಟದ ಬಳಿಕ ಶಿಲ್ಲಾಂಗ್ ಪೊಲೀಸರು ಆಳವಾದ ಕಂದಕವೊಂದರಲ್ಲಿ ರಾಜಾ ರಘುವಂಶಿ ಅವರ ಮೃತದೇಹವನ್ನು ಪತ್ತೆ ಹಚ್ಚಿದ್ದರು. ಅವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ದೃಢಪಡಿಸಿದ್ದರು.
ಹೃದ್ರೋಗಿಯಾಗಿದ್ದ ಸೋನಂ ತಂದೆ ದೇವಿ ಸಿಂಗ್, ತನ್ನ ಕಾರ್ಖಾನೆಯಲ್ಲೇ ಕೆಲಸ ಮಾಡ್ತಿದ್ದ ರಾಜ್‌ಗೆ ಕೊಟ್ಟು ಮದ್ವೆ ಮಾಡಲು ಒಪ್ಪಿಕೊಳ್ಳಲ್ಲ ಅನ್ನೋದು ಸೋನಂಗೆ ಗೊತ್ತಿತ್ತು. ಹಾಗಾಗಿಯೇ ಮಾಸ್ಟರ್ ಪ್ಲ್ಯಾನ್ ಮಾಡಿದ್ದಳು. ಮೊದಲು ರಾಜನನ್ನ ಮದುವೆ ಆಗಿಬಿಡೋಣ, ಅವನನ್ನು ಕೊಂದಮೇಲೆ ವಿಧವೆ ಅನ್ನೋ ಮಮಕಾರದಲ್ಲಾದ್ರೂ ರಾಜ್‌ಗೆ ತನ್ನನ್ನು ಕೊಟ್ಟು ಮದುವೆ ಮಾಡುತ್ತಾರೆ ಎಂಬುದು ಅವಳ ಪ್ಲ್ಯಾನ್ ಆಗಿತ್ತು ಅನ್ನೋದು ಪೊಲೀಸರ ವಿಚಾರಣೆ ವೇಳೆ ತಿಳಿದುಬಂದಿದೆ.ಇದನ್ನೂ ಓದಿ: Honeymoon Murder | ಕಾಂಟ್ರ್ಯಾಕ್ಟ್ ಕಿಲ್ಲರ್ಸ್.. ಫೋನ್‌ಕಾಲ್‌ನಲ್ಲೇ ಪಿನ್ ಟು ಪಿನ್ ಅಪ್ಡೇಟ್ – ಕೊಲೆ ರಹಸ್ಯ ಬಯಲಾಗಿದ್ದೇ ರೋಚಕ