– ಡಿಕೆಶಿ ಜೊತೆ ಪ್ರತಿದಿನ ಮಾತಾಡ್ತೀನಿ ಎಂದ ಸಹಕಾರ ಸಚಿವ
ಕೋಲಾರ: ಹನಿಟ್ರ‍್ಯಾಪ್ (Honeytrap) ಆರೋಪ ಮುಂದೆಯೂ ಬರಬಹುದು ಎಂದು ಹೇಳುವ ಮೂಲಕ ಕೋಲಾರದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ (KN Rajanna) ಹೊಸ ಬಾಂಬ್ ಸಿಡಿಸಿದ್ದಾರೆ.
ಹನಿಟ್ರ‍್ಯಾಪ್ ಕುರಿತು ಕೋಲಾರದಲ್ಲಿ (Kolar) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹನಿಟ್ರ‍್ಯಾಪ್ ಕುರಿತು ವಿಧಾನಸಭೆಯಲ್ಲಿ ಹೇಳುವಷ್ಟು ಹೇಳಿದ್ದೇನೆ. ಅದನ್ನು ಹೊರತು ಪಡಿಸಿ ಹೇಳುವಷ್ಟು ಏನು ಇಲ್ಲ. ಈ ಆರೋಪ ಒಂದಲ್ಲ, ಕಡೆಯದೂ ಅಲ್ಲ, ಮುಂದೆಯೂ ಬರಬಹುದು ಎಂದು ಹೇಳಿದರು. ಇದನ್ನೂ ಓದಿ: ಆರ್‌ಸಿಬಿ Vs ಕೋಲ್ಕತ್ತಾ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆ
ಹನಿಟ್ರ‍್ಯಾಪ್ ತನಿಖೆ ಕುರಿತು ಸಿಎಂ ಹಾಗೂ ಗೃಹಮಂತ್ರಿಗಳಿಗೆ ಬಿಟ್ಟ ವಿಚಾರ ಎಂದರು. ಡಿ.ಕೆ.ಶಿವಕುಮಾರ್ (DK Shivakumar) ಜೊತೆ ಚರ್ಚೆ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಪ್ರತಿದಿನ ಅವರ ಜೊತೆ ಮಾತನಾಡುವೆ ಎಂದು ತಿಳಿಸಿದರು. ಇದನ್ನೂ ಓದಿ: ಕೆಲಸಕ್ಕೆ ಹೋಗಿದ್ದಾಗ ಕಚ್ಚಿತು ನಾಯಿಮರಿ – ರೇಬಿಸ್‌ಗೆ ಸುಳ್ಯದ ಸಂಪಾಜೆಯ ಮಹಿಳೆ ಬಲಿ
ವಿಧಾನಸಭೆಯಲ್ಲಿ ಶಾಸಕರ ಅಮಾನತು ವಿಷಯದಲ್ಲಿ ನಾನಾಗಿದಿದ್ದರೆ ಇನ್ನೂ ಮುಂಚಿತವಾಗಿ ಈ ಕೆಲಸ ಮಾಡುತ್ತಿದ್ದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಕಪ್ಪು ಚುಕ್ಕೆ, ಜನಪರ ವಿಚಾರವನ್ನಿಟ್ಟುಕೊಂಡು ಶಾಸಕರು ಚರ್ಚೆ ಮಾಡುತ್ತಿಲ್ಲ. ಬಜೆಟ್ ಬಗ್ಗೆ 80 ಶಾಸಕರು ಪ್ರಸ್ತಾಪ ಮಾಡಿದ್ದಾರೆ, ಅದಕ್ಕೆ ಸಿಎಂ ಉತ್ತರ ಕೊಡಬೇಕಾಗಿದೆ. ಬಜೆಟ್ ಮೇಲಿನ ಸಿಎಂ ಉತ್ತರಕ್ಕೆ ಅಡಚಣೆ ಮಾಡಲು ಈ ರೀತಿ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದಲ್ಲಿ ಕಪ್ಪುಚುಕ್ಕೆ. ನಾನು ಸ್ಪೀಕರ್ ಆಗಿದ್ದರೆ ಮೊದಲೇ ಸಸ್ಪೆಂಡ್ ಮಾಡುತ್ತಿದೆ ಎಂದು ನುಡಿದರು. ಇದನ್ನೂ ಓದಿ: ಒಂದೇ ಒಂದು ಇಂಚು ಬೇರೆಯವರ ಜಾಗಕ್ಕೆ ನಾವು ಬೇಲಿ ಹಾಕಿಲ್ಲ: ನಿಖಿಲ್ ಕುಮಾರಸ್ವಾಮಿ
ರಾಜ್ಯದಲ್ಲಿ 5 ವರ್ಷ ಸರ್ಕಾರ ಅವಧಿ ಪೂರೈಕೆ ಮಾಡುತ್ತೆ, ಸಿಎಂ ಸಿದ್ದರಾಮಯ್ಯ 5 ವರ್ಷ ಇರುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಹೈಕಮಾಂಡ್ ನಿರ್ಧಾರ ಮಾಡುತ್ತೆ ಎಂದರು. ಕರ್ನಾಟಕ ಬಂದ್ ವಿಚಾರ ಸಂಬಂದ ಮಾತನಾಡಿದ ಅವರು, ಬೆಂಗಳೂರು ಬಂದ್ ಮಾಡಿದ್ರೆ ಬೆಳಗಾವಿ ಕನ್ನಡಿಗರಿಗೆ ರಕ್ಷಣೆ ಸಿಗುತ್ತಾ, ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಿ ಎಂದು ಹೇಳಿದರು. ಇದನ್ನೂ ಓದಿ: ಮಕ್ಕಳಲ್ಲಿನ ಜ್ಞಾನದಾಹ ನೀಗಿಸುತ್ತಿದೆ ನಮ್ಮ ಮೈಸೂರಿನ ಕಲಿಸು ಸಂಸ್ಥೆ: ಯದುವೀರ್ ಒಡೆಯರ್