ಮಡಿಕೇರಿ: ವಿವಾಹಿತ ಮಹಿಳೆಯಿಂದ ಹಾನಿಟ್ಯ್ರಾಪ್‌ಗೆ (Honeytrap) ಒಳಗಾದ ನಿವೃತ್ತ ಯೋಧ (Retired Soldier) ಡೆತ್ ನೋಟ್ ಬರೆದಿಟ್ಟು ಮಂಗಳವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಅವರ ಮೃತದೇಹ ಇದೀಗ ಅವರ ಮನೆ ಸಮೀಪದ ಪಂಪಿನ ಕೆರೆಯಲ್ಲಿ ಪತ್ತೆಯಾಗಿದೆ.
ಮೃತ ಮಾಜಿ ಯೋಧನನ್ನು ಸಂದೇಶ್ ಎಂದು ಗುರುತಿಸಲಾಗಿದೆ. ಮಾಜಿ ಯೋಧ ಕಣ್ಮರೆಯಾಗಿ 30 ಗಂಟೆಗಳ ಬಳಿಕ ಮೃತದೇಹ ಪತ್ತೆಯಾಗಿದೆ. ಬುಧವಾರ ರಾತ್ರಿ 8:20 ರ ಸುಮಾರಿಗೆ ಕೆರೆಯ 40 ಆಡಿ ಆಳದಲ್ಲಿ ಸಂದೇಶ್ ಮೃತದೇಹ ಪತ್ತೆಯಾಗಿದೆ.
Advertisement
Advertisement
ಬೆಳಗ್ಗೆಯಿಂದಲೂ ಅಗ್ನಿಶಾಮಕ ದಳ, ಸ್ಥಳೀಯರು ಕೆರೆಯಲ್ಲಿ ಹುಡುಕಾಟ ನಡೆಸಿದ್ದರು. ಯಾವುದೇ ಪ್ರಯೋಜನ ಆಗದೇ ಇದ್ದ ಸಂದರ್ಭದಲ್ಲಿ ಮಲ್ಪೆಯ ಹೆಸರಾಂತ ಮುಳುಗು ತಜ್ಞ ಈಶ್ವರ್ ಮತ್ತು ತಂಡದವರನ್ನು ಕರೆಸಿ ಮೃತದೇಹದ ಶೋಧ ಕಾರ್ಯವನ್ನು ಮಾಡಲಾಗಿತ್ತು. 1 ಗಂಟೆಗೂ ಅಧಿಕ ಕಾಲ ಕರೆಯಲ್ಲಿ ಆಕ್ಸಿಜನ್‌ನೊಂದಿಗೆ ಶೋಧ ಕಾರ್ಯ ನಡೆಸಲಾಗಿದ್ದು, ಈ ವೇಳೆ ಮಾಜಿ ಯೋಧನ ಮೃತ ದೇಹ ಪತ್ತೆಯಾಗಿದೆ. ಇದನ್ನೂ ಓದಿ: ಬಸ್‌ಗಳ ನಡುವೆ ಭೀಕರ ಅಪಘಾತ – ಮಿನಿ ಬಸ್ ಛಿದ್ರ
Advertisement
ಹನಿಟ್ರ್ಯಾಪ್ ಬಲೆಗೆ ಬಿದ್ದಿದ್ದ ಮಾಜಿ ಸೈನಿಕ ಸಂದೇಶ್ ತನ್ನ ಸಾವಿಗೆ ಜೀವಿತ, ಆಕೆಯನ್ನು ಬೆಂಬಲಿಸುತ್ತಿದ್ದ ಪೊಲೀಸ್ ಸತೀಶ್ ಹಾಗೂ ರೆಸಾರ್ಟ್ ಮಾಲೀಕ ಸತ್ಯ ಕಾರಣ ಎಂದು ಡೆತ್‌ನೋಟ್‌ನಲ್ಲಿ ಬರೆದಿಟ್ಟು ಮಂಗಳವಾರ ಸಂಜೆ ಪಂಪಿನ ಕೆರೆಗೆ ಹಾರಿದ್ದರು.
Advertisement
ಇದೀಗ ಡೆತ್‌ನೋಟ್ ಆಧರಿಸಿ ಮಡಿಕೇರಿ ನಗರ ಠಾಣೆಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಕೊಡಗು ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಮಾರ್ಗದರ್ಶನದಲ್ಲಿ ಉನ್ನತ ಪೊಲೀಸ್ ಅಧಿಕಾರಿಗಳಿಂದ ಪ್ರಕರಣದ ವಿವಿಧ ಆಯಾಮಗಳ ಬಗ್ಗೆ ತನಿಖೆ ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: ಸೌಜನ್ಯ ರೇಪ್ & ಮರ್ಡರ್ ಕೇಸ್- ಸಂತೋಷ್ ರಾವ್‍ನೇ ಆರೋಪಿ ಅಂತಾ ಮೇಲ್ಮನವಿ ಸಲ್ಲಿಸಿದ ಸಿಬಿಐ