ನವದೆಹಲಿ: ಆಂಡ್ರಾಯ್ಡ್ ಆವೃತ್ತಿಯಲ್ಲಿ ಹೆಸರು ಗಳಿಸುತ್ತಿರುವ ಹಾನರ್ ತನ್ನ ನೂತನ ಆವೃತ್ತಿಯ ಹಾನರ್ 9ಎನ್ ಸ್ಮಾರ್ಟ್ ಫೋನನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.
ನೂತನ ಹಾನರ್ 9ಎನ್ ಸ್ಮಾರ್ಟ್ ಫೋನ್ ನಲ್ಲಿ ಸೆಲ್ಫಿಗಾಗಿ 16 ಎಂಪಿ ಎಚ್‍ಡಿ ಕ್ಯಾಮೆರಾ ಹೊಂದಿದ್ದು, ಹಿಂದುಗಡೆ 13+2ಎಂಪಿ ಡ್ಯುಯಲ್ ಕ್ಯಾಮೆರಾವಿದೆ. ಲ್ಯಾವೆಂಡರ್ ಪರ್ಪಲ್, ರಾಬಿನ್ ಎಗ್ ಬ್ಲೂ, ಸಪೈರ್ ಬ್ಲೂ ಹಾಗೂ ಮಿಡ್ ನೈಟ್ ಬ್ಲಾಕ್ ಬಣ್ಣಗಳಲ್ಲಿ ಫೋನ್ ಲಭ್ಯವಿರಲಿದೆ. ಜುಲೈ 31 ರ ಮಧ್ಯಾಹ್ನ 12 ಗಂಟೆಯಿಂದ ಫ್ಲಿಪ್ ಕಾರ್ಟ್ ಆನ್‍ಲೈನ್ ಜಾಲತಾಣಗಳಲ್ಲಿ ನೂತನ ಸ್ಮಾರ್ಟ್ ಫೋನ್ ಲಭ್ಯವಿರಲಿದೆ.
Advertisement
Advertisement
ಬೆಲೆ ಎಷ್ಟು?
3ಜಿಬಿ RAM/32 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 11,999 ರೂ. 4ಜಿಬಿ RAM/64 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 13,999 ರೂ. ಹಾಗೂ 4ಜಿಬಿ RAM/128 ಜಿಬಿ ಆಂತರಿಕ ಮೆಮೊರಿಯ ಫೋನಿಗೆ 17,999 ರೂ. ದರ ನಿಗದಿ ಪಡಿಸಿದೆ.
Advertisement
ಹಾನರ್ 9ಎನ್ ಗುಣ ವೈಶಿಷ್ಟ್ಯಗಳು:
ಬಾಡಿ ಮತ್ತು ಡಿಸ್ಪ್ಲೇ: 149.2 x 71.8 x 7.7 ಮಿ.ಮೀ., 150 ಗ್ರಾಂ ತೂಕ, ಡ್ಯುಯಲ್ ಸಿಮ್(ನ್ಯಾನೋ ಸಿಮ್, ಡ್ಯುಯಲ್ ಸ್ಟ್ಯಾಂಡ್-ಬೈ) ವಿತ್ ಮೆಮೊರಿ ಕಾರ್ಡ್ ಸ್ಲಾಟ್ ಸೌಲಭ್ಯ, 5.84 ಇಂಚಿನ ಐಪಿಸಿ ಎಲ್‍ಸಿಡಿ ಕೆಪಾಸಿಟೆಟಿವ್ ಟಚ್ ಸ್ಕ್ರೀನ್(2280×1080 ಪಿಕ್ಸೆಲ್, 19:9 ಅನುಪಾತ 432ಪಿಪಿಐ)
Advertisement
ಪ್ಲಾಟ್‍ಫಾರಂ ಮತ್ತು ಮೆಮೊರಿ:
ಆಂಡ್ರಾಯ್ಡ್ 8.1 (ಓರಿಯೋ), ಕಿರಿನ್ 659, ಆಕ್ಟಾ ಕೋರ್ ಪ್ರೊಸೆಸರ್ 2.36 ಗೀಗಾಹಟ್ರ್ಸ್, 3ಜಿಬಿ RAM/32 ಜಿಬಿ ಆಂತರಿಕ ಮೆಮೊರಿ, 4ಜಿಬಿ RAM/64 ಜಿಬಿ ಆಂತರಿಕ ಮೆಮೊರಿ ಹಾಗೂ 4ಜಿಬಿ RAM/128 ಜಿಬಿ ಆಂತರಿಕ ಮೆಮೊರಿ ಹೊಂದಿದ್ದು, 256 ಜಿಬಿವರೆಗೆ ವಿಸ್ತರಿಸಬಹುದಾದ ಶೇಖರಣಾ ಸಾಮರ್ಥ್ಯ ಹೊಂದಿದೆ.
ಕ್ಯಾಮೆರಾ:
ಮುಂಭಾಗ 16ಎಂಪಿ ಎಚ್‍ಡಿ ಕ್ಯಾಮೆರಾ, ಹಿಂಭಾಗ 13+2 ಎಂಪಿ ಡ್ಯುಯಲ್ ಕ್ಯಾಮೆರಾ, ಆಟೋ ಮ್ಯಾಟಿಕ್ ಹೆಚ್‍ಡಿಆರ್ ಜೊತೆಗೆ, ಆಟೋ ಫೋಕಸ್ ಹಾಗೂ ಹೆಚ್‍ಡಿ ವಿಡಿಯೋ ರೆಕಾರ್ಡಿಂಗ್.
ಇತರೆ ಪ್ಯೂಚರ್ ಗಳು: 2.5 ಕಾರ್ನಿಂಗ್ ಗೊರಿಲ್ಲಾ ಗ್ಲಾಸ್, 12 ಲೆಯರ್ ಸೇಫ್ಟಿ ಗ್ಲಾಸ್, ಫಿಂಗರ್ ಪ್ರಿಂಟ್ ಸೆನ್ಸಾರ್, ಫೋಟೋ ಲಾಕಿಂಗ್, 3,000 ಎಂಎಹೆಚ್ ತೆಗೆಯಲು ಅಸಾಧ್ಯವಾದ ಬ್ಯಾಟರಿ ಸೌಲಭ್ಯವನ್ನು ಹೊಂದಿದೆ.