ಶಿವಮೊಗ್ಗ: ರೈತ ನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ಅವರು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿಯಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿ (Doctorate) ಸ್ವೀಕರಿಸಿದ್ದಾರೆ.
ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಜೀ ಮತ್ತು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯ ಇಂದು ನೀಡಿದ ಗೌರವ ಡಾಕ್ಟರೇಟ್ ಸನ್ಮಾನ, ವಿಶೇಷವಾಗಿ ನಮ್ಮ ಅನ್ನದಾತ ರೈತರ ಹಕ್ಕು ಹಾಗೂ ಹಿತರಕ್ಷಣೆ ನಿಟ್ಟಿನಲ್ಲಿ ನನ್ನ ಪ್ರಾಮಾಣಿಕ ಪ್ರಯತ್ನಗಳಿಗೆ ಸಂದ ಮನ್ನಣೆಯಾಗಿದೆ ಎಂದು ನಾನು ಭಾವಿಸುತ್ತೇನೆ. ನಮ್ಮ… pic.twitter.com/PoSIlKjYs0
— B.S.Yediyurappa (@BSYBJP) July 21, 2023
Advertisement
ಡಾಕ್ಟರೇಟ್ ಪದವಿ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಕೃಷಿ ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದ್ದು ಬದುಕಿನ ಅತ್ಯಂತ ಸುದೈವ ಸಂಗತಿ. ನಾನು ಸಹ ಕೃಷಿ ಕುಟುಂಬದಿಂದ ಜನಿಸಿದವನು. ಹೀಗಾಗಿ ರೈತನ ಕಷ್ಟ ಕಾರ್ಪಣ್ಯವನ್ನು ಹತ್ತಿರದಿಂದ ನೋಡಿದ್ದೇನೆ. ಹೀಗಾಗಿಯೇ ಕೃಷಿ ಬಜೆಟ್ ಮಂಡನೆ ಮಾಡಿದ್ದೆ ಎಂದರು. ಇದನ್ನೂ ಓದಿ: Nandini Milk: ನಂದಿನಿ ಹಾಲಿನ ದರ 3 ರೂ. ಹೆಚ್ಚಳ
Advertisement
Advertisement
ರಾಜ್ಯದಲ್ಲಿ ರೈತರ ಪರವಾಗಿ ನಡೆಸಿದ ಹಲವು ಹೋರಾಟಗಳನ್ನು, ಆ ಹೋರಾಟಗಳಲ್ಲಿ ಯಶಸ್ಸು ಕಂಡಿದ್ದನ್ನು ಸ್ಮರಿಸಿದರು. ಕೃಷಿ ಕುಟುಂಬ ನೆಮ್ಮದಿಯಿಂದ ಇರಬೇಕು. ರೈತರ ಕಲ್ಯಾಣವಾಗಬೇಕು. ಇದಕ್ಕಾಗಿ ಸದಾ ಹೋರಾಟ ನಡೆಸುತ್ತೇನೆ ಎಂದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಶಾಸಕತ್ವ ಅಸಿಂಧು ಕೋರಿ ಅರ್ಜಿ – ಜು.28 ಕ್ಕೆ ಹೈಕೋರ್ಟ್‌ನಿಂದ ವಿಚಾರಣೆ
Advertisement
Web Stories