ನವದೆಹಲಿ: ಕ್ರಿಕೆಟ್ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಇಂದಿನಿಂದ ಸೇನಾ ಕೆಲಸದಲ್ಲಿ ಭಾಗಿಯಾಗಲಿದ್ದಾರೆ. ಕೈಯಲ್ಲಿ ಎಕೆ-47 ಮತ್ತು 19 ಕೆಜೆ ಭಾರದ ಬ್ಯಾಗ್ ಹೊತ್ತು ಕಾಶ್ಮೀರ ಪರ್ವತ ಶ್ರೇಣಿಯಲ್ಲಿ ಗಸ್ತು ತಿರುಗಲಿದ್ದಾರೆ.
106ನೇ ಟೆರಿಟೋರಿಯಲ್ ಆರ್ಮಿ ಬಟಾಲಿಯನ್ ಪ್ಯಾರಾ ಕಮಾಂಡೋ ಯುನಿಟ್ ನಲ್ಲಿ ಧೋನಿ ಕಾರ್ಯ ನಿರ್ವಹಿಸಲಿದ್ದಾರೆ. ಅವಂತಿಪೋರಾದ ತೈನಾತಿ ಘಾಟಿಯಲ್ಲಿ ಧೋನಿ ಗಸ್ತು ತಿರುಗಲಿದ್ದಾರೆ ಎಂದು ವರದಿಯಾಗಿದೆ. ಇಲ್ಲಿಯೇ ಪಟ್ರೋಲಿಂಗ್, ಗಾರ್ಡ್ ಮತ್ತು ಪೋಸ್ಟ್ ಡ್ಯೂಟಿಯನ್ನು ಧೋನಿ ನಿರ್ವಹಿಸಲಿದ್ದಾರೆ.
Advertisement
ಆರಂಭದ ಮೂರು ದಿನ ಧೋನಿಯವರಿಗೆ ಸೇನೆಯ ಪ್ರಾಥಮಿಕ ತರಬೇತಿಯನ್ನು ನೀಡಲಾಗುತ್ತದೆ. ಇದೇ ವೇಳೆ ಸೇನೆಯ ಬಗ್ಗೆ ಮಾಹಿತಿ, ಫೈರಿಂಗ್ ಸಹ ಹೇಳಿಕೊಡಲಾಗುತ್ತದೆ. ವೆಸ್ಟ್ ಇಂಡೀಸ್ ಪ್ರವಾಸದಿಂದ ರಜೆ ಪಡೆದುಕೊಂಡಿರುವ ಧೋನಿ ಇಂದಿನಿಂದ ಆಗಸ್ಟ್ 15ರವರೆಗೆ ಕಾಶ್ಮೀರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಈ ಬಾರಿಯ ಸ್ವತಂತ್ರ ದಿನಾಚರಣೆಯನ್ನು ಧೋನಿ ಸೈನಿಕರೊಂದಿಗೆ ಆಚರಿಸಲಿದ್ದಾರೆ. ಇದನ್ನೂ ಓದಿ: ಧೋನಿ ವಿಡಿಯೋ ಟ್ವೀಟ್ ಮಾಡಿ ಸೆಲ್ಯೂಟ್ ಹೊಡೆದ ಕಾಟ್ರೆಲ್
Advertisement
Advertisement
ಭಾರತೀಯ ಸೇನೆಯ ಪ್ಯಾರಾಚೂಟ್ ರೆಜಿಮೆಂಟ್‍ನ ಟೆರಿಟೊರಿಯಲ್ ಅರ್ಮಿ ಯೂನಿಟ್‍ನಲ್ಲಿ 38 ವರ್ಷದ ಧೋನಿ ಅವರಿಗೆ 2011 ರಲ್ಲಿ ಗೌರವ ಲೆಫ್ಟಿನೆಂಟ್ ಕರ್ನಲ್ ಹುದ್ದೆ ನೀಡಲಾಗಿತ್ತು. ವಿಶೇಷ ಎಂದರೆ 2015 ರಲ್ಲಿ ಆಗ್ರಾದಲ್ಲಿ ಪ್ಯಾರಾಚೂಟ್ ರೆಜಿಮೆಂಟ್ ಸೇನಾ ತಂಡದೊಂದಿಗೆ ಧೋನಿ ತರಬೇತಿ ಪಡೆದಿದ್ದರು.
Advertisement
1923ರಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಕರ್ನಲ್ ಸಿಕೆ ನಾಯ್ಡು ಅವರು ಹೋಲ್ಕರ್ ರಾಜನ ಆಹ್ವಾನದ ಮೇರೆಗೆ ಇಂದೋರ್ ತೆರಳಿದ್ದರು. ಅಂದು ಸಿ.ಕೆ.ನಾಯ್ಡು ಅವರಿಗೆ ‘ಕರ್ನಲ್’ ಪದವಿಯನ್ನು ನೀಡಿ ಗೌರವಿಸಲಾಗಿತ್ತು. ಲೆಫ್ಟಿನೆಂಟ್ ಕರ್ನಲ್ ಹೇಮು ಎರಡನೇ ವಿಶ್ವಯುದ್ಧದಲ್ಲಿ ಭಾಗಿಯಾದ ಹಿನ್ನೆಲೆಯಲ್ಲಿ ಟೆಸ್ಟ್ ಅಂಗಳದ ಪಾದಾರ್ಪಣೆ ತಡವಾಗಿತ್ತು. ಆಸ್ಟ್ರೇಲಿಯಾದ ಸರ್ ಡಾನ್ ಬ್ರಾಡ್ಮನ್ ಸಹ ಸೇನೆಯಲ್ಲಿ ಕಾರ್ಯನಿರ್ವಹಿಸಿದ್ದರು.