ಮಡಿಕೇರಿ: ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದಂತಹ ಹುತಾತ್ಮ ಅಧಿಕಾರಿ, ಸಿಬ್ಬಂದಿಗಳಿಗೆ ಮಡಿಕೇರಿಯಲ್ಲಿ ಗೌರವ ನಮನ ಸಲ್ಲಿಸಲಾಯಿತು.
Advertisement
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನದ ಹಿನ್ನೆಲೆ ಕೊಡಗು ಅರಣ್ಯ ವೃತ್ತದಲ್ಲಿ ಅರಣ್ಯ ಮತ್ತು ವನ್ಯಜೀವಿಗಳ ಸಂರಕ್ಷಣೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದಂತಹ ಅರಣ್ಯ ಅಧಿಕಾರಿಗಳಿಗೆ ಗೌರವ ಸಲ್ಲಿಸುವ ಮೂಲಕ ಹುತಾತ್ಮ ದಿನಾಚರಣೆಯನ್ನು ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ಇದನ್ನೂ ಓದಿ: ಕರ್ನಾಲ್ ರೈತ ಪ್ರತಿಭಟನೆಗೆ ಮಣಿದ ಸರ್ಕಾರ – ಐಎಎಸ್ ಅಧಿಕಾರಿಯ ವಿರುದ್ಧ ತನಿಖೆಗೆ ಅಸ್ತು
Advertisement
Advertisement
Advertisement
ಮಡಿಕೇರಿ ನಗರದ ಅರಣ್ಯ ಭವನದಲ್ಲಿ ಅಯೋಜಿಸಲಾದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೊಡಗು ಅರಣ್ಯ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿಗಳು ತಾಕತ್ ಸಿಂಗ್ ರಾಣಾವತ್ ಹಾಗೂ ಮಡಿಕೇರಿ ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಏ ಟಿ ಪೂವಯ್ಯ ಹಾಗೂ ಕೊಡಗು ವೃತ್ತದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು, ಉಪವಲಯ ಅರಣ್ಯ ಅಧಿಕಾರಿಗಳು, ಅರಣ್ಯ ರಕ್ಷಕರು, ಅರಣ್ಯ ವೀಕ್ಷಕರು ಮತ್ತು ಕಚೇರಿ ಸಿಬ್ಬಂದಿ ಹುತಾತ್ಮರಾದ ಅಧಿಕಾರಿ ಹಾಗೂ ಸಿಬ್ಬಂದಿಗೆ ಗೌರವ ಸಮರ್ಪಣೆ ಮಾಡಿದರು. ಇದನ್ನೂ ಓದಿ: 46 ವರ್ಷದ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭಾರೀ ಮಳೆ