– ಸಂವಿಧಾನದ ನಿರ್ಮಾತೃಗಳನ್ನು ಗೌರವಿಸುವ ದಿನ; ಪ್ರಧಾನಿ ಶುಭಾಶಯ
ನವದೆಹಲಿ: ಸ್ವತಂತ್ರ ಭಾರತಕ್ಕೆ ಸಂವಿಧಾನ (Constitution) ರೂಪಿಸಲು ರಚನಾ ಸಭೆ ಸ್ಥಾಪನೆಯಾಗಿದ್ದು 1946ರಲ್ಲಿ. ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತ್ವತ್ವದಲ್ಲಿ ನೂರಾರು ಮಂದಿ ಸುಮಾರು ಮೂರು ವರ್ಷ ಶ್ರಮಿಸಿ ಸಂವಿಧಾನ ರೂಪಿಸಿದರು.
ಸಂವಿಧಾನ ರಚನಾ ಸಭೆಯು 1949ರ ನ.26ರಂದು ಸಂವಿಧಾನವನ್ನ ಅಂಗೀಕರಿಸಿತು. ದೇಶದಲ್ಲಿ ಸಂವಿಧಾನವು 1950 ಜ.26ರಂದು ಜಾರಿಗೆ ಬಂತು. ಸಂವಿಧಾನ ರಚನೆಯ ವೇಳೆ ಅಮೆರಿಕ, ಬ್ರಿಟನ್, ಐರ್ಲೆಂಡ್‌ನ ಸಂವಿಧಾನದ ಕೆಲವು ಅಂಶಗಳು, ಗಾಂಧಿ ತತ್ವಗಳಿಂದಲೂ ಪ್ರೇರಣೆ ಪಡೆಯಲಾಗಿದೆ. ಭಾರತದ ಸಂವಿಧಾನವು (Indian Constitution) ಜಗತ್ತಿನಲ್ಲಿಯೇ ಅತ್ಯಂತ ವಿಶಿಷ್ಟ ಸ್ಥಾನ ಪಡೆದಿದ್ದು, ಹಲವು ದಾಖಲೆಗಳಿಗೆ ಪಾತ್ರವಾಗಿದೆ. ಜಗತ್ತಿನಲ್ಲಿಯೇ ಅತಿ ಹೆಚ್ಚು ತಿದ್ದುಪಡಿಗಳಾಗಿರುವ ಸಂವಿಧಾನ ಎನ್ನುವ ವಿಶೇಷತೆಯೂ ನಮ್ಮ ಸಂವಿಧಾನಕ್ಕಿದೆ. ಇದನ್ನೂ ಓದಿ: 2047ರಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ರಾಮನ ಗುಣ ಮೈಗೂಡಿಸಿಕೊಳ್ಳಬೇಕು: ಮೋದಿ
On Constitution Day, we pay tribute to the framers of our Constitution. Their vision and foresight continue to motivate us in our pursuit of building a Viksit Bharat.
Our Constitution gives utmost importance to human dignity, equality and liberty. While it empowers us with…
— Narendra Modi (@narendramodi) November 26, 2025
ಭಾರತದಂತಹ ನೂರಾರು ಜಾತಿ, ಹತ್ತಾರು ಧರ್ಮ, ವೈವಿಧ್ಯಮಯವಾದ ಸಂಸ್ಕೃತಿ, ಆಚರಣೆಗಳಿಂದ ಕೂಡಿರುವ ದೇಶಕ್ಕೆ ಸಂವಿಧಾನವನ್ನು ರೂಪಿಸುವುದು ಅತ್ಯಂತ ಸವಾಲಿನ ಕೆಲಸವಾಗಿತ್ತು. ಭಾರತವು ಇಂದು ಜಾಗತಿಕ ಮಟ್ಟದಲ್ಲಿ ಗಮನಾರ್ಹ ಸ್ಥಾನ ಪಡೆದಿದ್ದರೆ, ಅದಕ್ಕೆ ಕಾರಣ, ನಮ್ಮ ಸಶಕ್ತವಾದ ಸಂವಿಧಾನ. ಅದು ದೇಶದ ಆಡಳಿತ ಮತ್ತು ಜನರ ಚಿಂತನೆಯ ಚಾಲಕಶಕ್ತಿಯಾಗಿದೆ. ಈ ದಿನದಂದು ಸಂವಿಧಾನ ನಿರ್ಮಾತೃಗಳನ್ನು ಸ್ಮರಿಸುವ ಕೆಲಸ ಪ್ರಧಾನಿ ಮೋದಿ (Narendra Modi) ಮಾಡಿದ್ದಾರೆ.
ತಮ್ಮ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಂವಿಧಾನ ದಿನದ ಶುಭಾಶಯ ಕೋರಿದ್ದಾರೆ. ಇದನ್ನೂ ಓದಿ: ಟ್ರಂಪ್ ಸುಂಕಾಸ್ತ್ರದ ನಡುವೆಯೂ ಭಾರತದ ಕೃಷಿ ಉತ್ಪನ್ನ ರಫ್ತಲ್ಲಿ ಸಾಧನೆ – ಸಾಧ್ಯವಾಗಿದ್ದು ಹೇಗೆ?

ಸಂವಿಧಾನ ದಿನದಂದು, ನಮ್ಮ ಸಂವಿಧಾನದ ನಿರ್ಮಾತೃಗಳಿಗೆ ನಾವು ಗೌರವ ಸಲ್ಲಿಸುತ್ತೇವೆ. ಅವರ ದೂರದೃಷ್ಟಿಯು ವಿಕ್ಷಿತ ಭಾರತ ನಿರ್ಮಿಸುವ ನಮ್ಮ ಪ್ರಯತ್ನದಲ್ಲಿ ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತದೆ. ನಮ್ಮ ಸಂವಿಧಾನವು ಮಾನವ ಘನತೆ, ಸಮಾನತೆ ಮತ್ತು ಸ್ವಾತಂತ್ರ್ಯಕ್ಕೆ ಅತ್ಯಂತ ಪ್ರಾಮುಖ್ಯತೆಯನ್ನ ನೀಡುತ್ತದೆ. ಇದು ನಮಗೆ ಹಕ್ಕುಗಳೊಂದಿಗೆ ಅಧಿಕಾರ ನೀಡುವುದರ ಜೊತೆಗೆ, ನಾಗರಿಕರಾಗಿ ನಮ್ಮ ಕರ್ತವ್ಯಗಳನ್ನು ನೆನಪಿಸುತ್ತದೆ. ನಮ್ಮ ಕರ್ತವ್ಯವನ್ನ ನಾವು ಯಾವಾಗಲೂ ಪೂರೈಸಲು ಪ್ರಯತ್ನಿಸಬೇಕು. ಈ ಕರ್ತವ್ಯಗಳು ಬಲವಾದ ಪ್ರಜಾಪ್ರಭುತ್ವದ ಅಡಿಪಾಯ ಆಗಿದೆ. ನಮ್ಮ ಕಾರ್ಯಗಳ ಮೂಲಕ ಸಾಂವಿಧಾನಿಕ ಮೌಲ್ಯಗಳನ್ನ ಬಲಪಡಿಸುವ ನಮ್ಮ ಬದ್ಧತೆಯನ್ನ ಪುನರುಚ್ಚರಿಸೋಣ ಅಂತ ಕರೆ ನೀಡಿದ್ದಾರೆ.

