ಬೆಂಗಳೂರು: ಕಾರು ಟಚ್ ಮಾಡಿದ್ದನ್ನು ಪ್ರಶ್ನಿಸಿದ್ದಕ್ಕೆ ಟ್ಯಾಕ್ಸಿ ಚಾಲಕನ (Taxi Driver) ಮೇಲೆ ಇನ್ನೋವಾ ಕಾರು (Innova Car) ಚಾಲಕ ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ ಹಿನ್ನೆಲೆ ಸಾರ್ವಜನಿಕರು ಇನ್ನೋವಾ ಕಾರು ಪುಡಿಗಟ್ಟಿದ ಘಟನೆ ಬೆಂಗಳೂರಿನ (Bengaluru) ಓಕಳಿಪುರಂ (Okalipuram) ಜಂಕ್ಷನ್‌ನಲ್ಲಿ ನಡೆದಿದೆ.
ಮೆಜೆಸ್ಟಿಕ್ ಸಮೀಪದಲ್ಲಿರುವ ರೈಲ್ವೇ ಗೇಟ್ ಹಿಂಭಾಗದ ರಸ್ತೆಯಲ್ಲಿ ಕ್ಯಾಬ್ ಚಾಲಕ ಕುಮಾರ್ ಪ್ಯಾಸೆಂಜರ್ ಕರೆದುಕೊಂಡು ವಿಜಯನಗರದಿಂದ ಬರುತ್ತಿದ್ದ. ಇದೇ ವೇಳೆ ಹಿಂಬದಿಯಿಂದ ಬಂದ ಇನ್ನೋವಾ ಕಾರು ಇಟಿಯೋಸ್ ಕ್ಯಾಬ್‌ಗೆ ಟಚ್ ಆಗಿದೆ. ಈ ವೇಳೆ ಇಬ್ಬರು ಚಾಲಕರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಕಾರಿಂದ ಇಳಿದು ಬಂದ ಇನ್ನೋವಾ ಕಾರು ಚಾಲಕ ಕ್ಯಾಬ್ ಚಾಲಕನಿಗೆ ಥಳಿಸಿದ್ದಾನೆ. ಕಾರಲ್ಲಿ ಪ್ಯಾಸೆಂಜರ್ ಇದ್ದಿದ್ದರಿಂದ ಇಟಿಯೋಸ್ ಕಾರು ಚಾಲಕ ಸುಮ್ಮನಿದ್ದ. ಇಷ್ಟಾದರೂ ಸುಮ್ಮನಾಗದ ಇನ್ನೋವ ಕಾರು ಚಾಲಕ ಕಾರಿನಿಂದ ಮಚ್ಚು ತಂದು ಇಟಿಯೋಸ್ ಕಾರು ಚಾಲಕನ ಕುತ್ತಿಗೆಗೆ ಇಟ್ಟು ಬೆದರಿಕೆ ಹಾಕಿದ್ದಾನೆ. ಇದರಿಂದ ಆತ ಭಯಗೊಂಡರೇ, ಅಲ್ಲೇ ಇದ್ದ ಜನರು ರೊಚ್ಚಿಗೆದ್ದರು. ಇನ್ನೋವಾ ಕಾರು ಚಾಲಕನ ಅಟ್ಟಹಾಸ ಕಂಡ ಜನರು ಆತನನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ಕಲ್ಲಿನಿಂದ ಕಾರಿನ ಗಾಜುಗಳನ್ನ ಪುಡಿಪುಡಿ ಮಾಡಿದ್ದಾರೆ. ಜನರ ಆಕ್ರೋಶಕ್ಕೆ ಹೆದರಿದ ಆಸಾಮಿ ಕಾರನ್ನು ಅಲ್ಲಿಯೇ ಬಿಟ್ಟು ಪರಾರಿ ಆಗಿದ್ದಾನೆ. ಇದನ್ನೂ ಓದಿ: ಮಾಟ ಮಾಡ್ತಾರೆ ಅಂತ ಒಂದೇ ಕುಟುಂಬದ ಐವರನ್ನು ಜೀವಂತವಾಗಿ ಸುಟ್ಟು ಹತ್ಯೆ
ಸ್ಥಳಕ್ಕೆ ಬಂದ ಶೇಷಾದ್ರಿಪುರಂ ಸಂಚಾರ ಪೊಲೀಸರು ಕಾರನ್ನು ಸ್ಥಳಾಂತರಗೊಳಿಸಿದರು. ಇನ್ನು ಕ್ಯಾಬ್ ಚಾಲಕ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ದೂರು ದಾಖಲಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಇನ್ನೋವಾ ಕಾರು ಚಾಲಕನ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಪಾಕ್ ಬೇಹುಗಾರ್ತಿಗೆ ಕೇರಳ ಸರ್ಕಾರ ಧನಸಹಾಯ – ಸರ್ಕಾರದ ಖರ್ಚಿನಲ್ಲಿ ವ್ಲಾಗರ್ ಜ್ಯೋತಿ ಪ್ರವಾಸ