ಲಕ್ನೋ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸಮಾಜವಾದಿ ಪಕ್ಷದ ವರಿಷ್ಠೆ ಮಾಯಾವತಿ ಅವರು ಬೆಂಬಲಿಸಿದ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರವನ್ನು ಹಾಡಿ ಹೊಗಳಿದ್ದಾರೆ.
ಸಂವಿಧಾನದಲ್ಲಿ ರೂಪಿಸಲಾದ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯವನ್ನು ದೇಶಾದ್ಯಂತ ವಿಸ್ತರಿಸಬೇಕು. 370ನೇ ವಿಧಿ ಮತ್ತು 35ಎ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬುದು ದೀರ್ಘಕಾಲದ ಬೇಡಿಕೆಯಾಗಿತ್ತು. ಅದು ಈಗ ಈಡೇರಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
Advertisement
इसी प्रकार, जम्मू-कश्मीर के लेह-लद्दाख को अलग से केन्द्र शासित क्षेत्र घोषित किए जाने से ख़ासकर वहाँ के बौद्ध समुदाय के लोगों की बहुत पुरानी माँग अब पूरी हुई है, जिसका भी बीएसपी स्वागत करती है। इससे पूरे देश में विशेषकर बाबा साहेब डा. भीमराव अम्बेडकर के बौद्ध अनुयाई काफी खुश हैं।
— Mayawati (@Mayawati) August 6, 2019
Advertisement
ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಜಮ್ಮು ಮತ್ತು ಕಾಶ್ಮೀರದ ಜನತೆ ಉತ್ತಮ ಲಾಭ ಪಡೆಯಲಿದ್ದಾರೆ ಎಂದು ಬಿಎಸ್‍ಪಿ ನಂಬಿದೆ ಎಂದು ಟ್ವೀಟ್ ಮಾಡುವ ಮೂಲಕ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
Advertisement
ಅಲ್ಲದೆ, ಲಡಾಕ್‍ನ್ನು ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿದ್ದ ನಿರ್ಧಾರವನ್ನು ಸಹ ಮಾಯಾವತಿ ಅವರು ಸ್ವಾಗತಿಸಿದ್ದಾರೆ. ಇದರಿಂದ ಬೌದ್ಧ ಜನರ ಹಳೆಯ ಬೇಡಿಕೆಗಳನ್ನು ಈಡೇರಿಸಿದಂತಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಅವರ ಬೌದ್ಧ ಅನುಯಾಯಿಗಳು ದೇಶಾದ್ಯಂತ ಸಂತಸಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
Advertisement
ಸೋಮವಾರ ರಾಜ್ಯಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪರಿಚಯಿಸಿದ 370ನೇ ವಿಧಿ ಹಾಗೂ 35ಎ ರದ್ದತಿ ಕುರಿತ ನಿರ್ಧಾರಕ್ಕೆ ಹಲವು ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ. ಆದರೆ, ಕೇಂದ್ರ ಸರ್ಕಾರದ ನಿಲುವಿಗೆ ಬಿಎಸ್‍ಪಿ ಬೆಂಬಲ ವ್ಯಕ್ತಪಡಿಸಿತ್ತು.