ರಾಮನಗರ: ಬೆಂಗಳೂರು-ಮೈಸೂರು (Benagaluru-Mysuru) ಎಕ್ಸ್ಪ್ರೆಸ್ವೇಯಲ್ಲಿ ಲಾರಿ ಹಾಗೂ ಟಿಟಿ ವಾಹನ ನಡುವೆ ಭೀಕರ ಅಪಘತದಿಂದ (Accident ) 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಮೂವರು ಸಾವನ್ನಪ್ಪಿರುವ ಘಟನೆ ತಡರಾತ್ರಿ ನಡೆದಿದೆ.
ಬೆಂಗಳೂರಿನಿಂದ ಮೈಸೂರಿಗೆ ಟಿಟಿ ವಾಹನ ಹೋಗುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಚಾಮುಂಡೇಶ್ವರಿ ಆಸ್ಪತ್ರೆ ಬಳಿ ಟಿಟಿ ಲಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಟಿಟಿ ವಾಹನ ಸಂಪೂರ್ಣ ಜಖಂಗೊಂಡಿದೆ. ಇದನ್ನೂ ಓದಿ: ಕಾಂತಾರ-2ನಲ್ಲಿ ದೈವಾರಾಧನೆ ಪ್ರದರ್ಶನವಾದ್ರೆ ಉಗ್ರ ಹೋರಾಟ – ರಿಷಬ್ ಶೆಟ್ಟಿಗೆ ವಿಹೆಚ್ಪಿ, ಬಜರಂಗ ದಳ ಎಚ್ಚರಿಕೆ
Advertisement
Advertisement
ಟಿಟಿ ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಚಾಮುಂಡೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ರಿಲ್ಯಾಕ್ಸ್ ಮೂಡ್ನಲ್ಲಿದ್ದ ಶೆಟ್ಟರ್ಗೆ ತಟ್ಟಿತು ಕೈ ಕಾರ್ಯಕರ್ತರ ಪ್ರತಿಭಟನೆ ಬಿಸಿ
Advertisement
Advertisement
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಚನ್ನಪಟ್ಟಣ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನೇಣು ಬಿಗಿದುಕೊಂಡು ಮಹಿಳಾ ಪೇದೆ ಆತ್ಮಹತ್ಯೆ