ಬಸ್‌ಗಳ ನಡುವೆ ಭೀಕರ ಅಪಘಾತ – ಮಿನಿ ಬಸ್ ಛಿದ್ರ

Public TV
1 Min Read
Chikkaballapur bus accident

ಚಿಕ್ಕಬಳ್ಳಾಪುರ: ಕೆಎಸ್‌ಆರ್‌ಟಿಸಿ ಬಸ್ (KSRTC Bus) ಹಾಗೂ ಮಿನಿ ಬಸ್ (Mini Bus) ನಡುವೆ ಭೀಕರ ಅಪಘಾತ (Accident) ಸಂಭವಿಸಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಚಿಂತಾಮಣಿ (Chintamani) ತಾಲೂಕಿನ ಚಿನ್ನಸಂದ್ರ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಮಿನಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಮಿನಿ ಬಸ್‌ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.

Chikkaballapur bus accident 1

ಮೃತ ವ್ಯಕ್ತಿಯನ್ನು ಕೈವಾರ ಮೂಲದ 40 ವರ್ಷದ ಇಲ್ಲು ಎಂದು ಗುರುತಿಸಲಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗ ಸಂಪೂರ್ಣ ಜಖಂ ಆಗಿದ್ದು ಮಿನಿ ಬಸ್ ಸಂಪೂರ್ಣ ಛಿದ್ರ ಛಿದ್ರವಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು ಮೂವರ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳುಗಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಐವರ ಜಲಸಮಾಧಿ ಬಳಿಕ ಎಚ್ಚೆತ್ತ ಅಧಿಕಾರಿಗಳು – ಆರಂಭವಾಯ್ತು ತಡೆಗೋಡೆ ನಿರ್ಮಾಣ ಕಾರ್ಯ

ಅಪಘಾತದಿಂದ ಚಿಂತಾಮಣಿ ಬೆಂಗಳೂರು ಮಾರ್ಗದಲ್ಲಿ ಬಹಳಷ್ಟು ಟ್ರಾಫಿಕ್ ಜಾಮ್ ಉಂಟಾಗಿದ್ದು ಪೊಲೀಸರು ಟ್ರಾಫಿಕ್ ಕ್ಲಿಯರ್ ಮಾಡುವ ಮೂಲಕ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಈ ಸಂಬಂಧ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಾಪತ್ತೆಯಾಗಿ ಮೂರು ದಿನಗಳ ಬಳಿಕ ದಟ್ಟ ಅರಣ್ಯದಲ್ಲಿ ಪತ್ತೆಯಾದ 85ರ ವೃದ್ಧೆ

Share This Article