ಆನೇಕಲ್: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ (Road Accident) ಸಂಭವಿಸಿರುವ ಘಟನೆ ಹೊಸಕೋಟೆ (Hosakote) ಸಮೀಪದ ಅತ್ತಿವಾಟ ಗೇಟ್ ಬಳಿ ನಡೆದಿದೆ.

ಡಿಕ್ಕಿಯ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನ (KSRTC Bus) ಮುಂಭಾಗ ಸಂಪೂರ್ಣ ಛಿದ್ರವಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಹಾಸನದಲ್ಲಿ ರೌಡಿಶೀಟರ್‌ನ ಬರ್ಬರ ಹತ್ಯೆ – ದುಷ್ಕರ್ಮಿಗಳು ಎಸ್ಕೇಪ್

ಗಾಯಾಳುಗಳನ್ನ ಹೊಸಕೋಟೆಯ ಸರ್ಕಾರಿ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಘಟನಾ ಸ್ಥಳಕ್ಕೆ ಹೊಸಕೋಟೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೊಟ್ಟಿಯೂರು ದೇವಸ್ಥಾನದಲ್ಲಿ ಕರ್ನಾಟಕ ಭಕ್ತರ ಮೇಲೆ ದುರ್ವರ್ತನೆ – ನೂಕುನುಗ್ಗಲು, ಭಾರೀ ಅವ್ಯವಸ್ಥೆ
