ರಾಯಚೂರು: ಲಾರಿಯನ್ನು ಓವರ್‌ಟೇಕ್ ಮಾಡಲು ಹೋಗಿ ಬೈಕ್‌ನಿಂದ ಬಿದ್ದ ಮಹಿಳೆಯ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು (Raichuru) ಜಿಲ್ಲೆಯ ಸಿಂಧನೂರು (Sindhanuru) ತಾಲೂಕಿನ ಅರಗಿನಮರ ಕ್ಯಾಂಪ್‌ನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಸಿಂಧನೂರು ತಾಲೂಕು ಪುಲಮೇಶ್ವರ (Pulameshwara) ದಿನ್ನಿ ಗ್ರಾಮದ ನಿವಾಸಿ 50 ವರ್ಷದ ಹುಸೇನಮ್ಮ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಬೀದರ್ | ಚಳಿ ಹೆಚ್ಚಳಕ್ಕೆ ಸರ್ಕಾರಿ ಶಾಲೆಯ ಶೈಕ್ಷಣಿಕ ಪ್ರವಾಸ ರದ್ದುಪಡಿಸಲು ಒತ್ತಾಯ
ಪುಲಮೇಶ್ವರದಿಂದ ಸಿಂಧನೂರು ಕಡೆಗೆ ಹುಸೇನಮ್ಮ, ಮಗ ಹಾಗೂ ಮಗಳೊಂದಿಗೆ ಹೊರಟಿದ್ದರು. ಈ ವೇಳೆ ಲಾರಿಯನ್ನು ಓವರ್‌ಟೇಕ್ ಮಾಡಲು ಹೋದ ಬೈಕ್ ನಿಯಂತ್ರಣ ತಪ್ಪಿದ್ದು, ಹುಸೇನಮ್ಮ ಕೆಳಗೆ ಬಿದ್ದಿದ್ದಾರೆ. ಅದೇ ಸಮಯಕ್ಕೆ ಅವರ ಮೇಲೆ ಲಾರಿ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಅಪಘಾತದಲ್ಲಿ ತಾಯಿಯ ದೇಹ ಎರಡು ಭಾಗವಾಗಿದ್ದು, ತಾಯಿಯ ಮೃತದೇಹವನ್ನು ಕಂಡು ರಸ್ತೆಯಲ್ಲೇ ಮಕ್ಕಳ ಆಕ್ರಂದನ ಮುಗಿಲು ಮುಟ್ಟಿದೆ. ಸಿಂಧನೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಸಿಂಧನೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಕ್ರಿಸ್‌ಮಸ್ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ