ಮಂಡ್ಯ: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ (Expressway) ಭೀಕರ ಅಪಘಾತ ಸಂಭವಿಸಿದ ಪರಿಣಾಮ ಅಪಘಾತದಿಂದ ಸ್ಥಳದಲ್ಲಿ ಮಾಜಿ ಸೈನಿಕರೊಬ್ಬರು ಸಾವನ್ನಪ್ಪಿದ್ದು, ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿದೆ.
ಮಂಡ್ಯ (Mandya) ಜಿಲ್ಲೆಯ ಶ್ರೀರಂಗಪಟ್ಟಣ (Srirangapatna) ತಾಲೂಕಿನ ನಗುವಿನಹಳ್ಳಿ ಬಳಿಯ ಎಕ್ಸ್‌ಪ್ರೆಸ್ ವೇಯಲ್ಲಿ ಭಾನುವಾರ ಬೆಳಗ್ಗೆ 6:30ರ ವೇಳೆಯಲ್ಲಿ ಈ ಘಟನೆ ಜರುಗಿದೆ. ಆನೇಕಲ್ (Anekal) ಮೂಲದ ಮಾಜಿ ಸೈನಿಕ ಕಿಶೋರ್ ಬಾಬು (45) ಸಾವನ್ನಪ್ಪಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ. ಆನೇಕಲ್‌ನಿಂದ ತಮಿಳುನಾಡಿಗೆ ಎಕ್ಸ್‌ಯುವಿ (XUV) ಮಹೇಂದ್ರ ಕಾರಿನಲ್ಲಿ ಕಿಶೋರ್ ಹಾಗೂ ನಾಲ್ವರು ಹೋಗುತ್ತಿದ್ದರು. ಈ ವೇಳೆ ನಗುವಿನಹಳ್ಳಿ ಬಳಿ ಭೀಕರ ಅಪಘಾತ (Accident) ನಡೆದಿದೆ. ಇದನ್ನೂ ಓದಿ: ಪಿಎಸ್‍ಐ ಪುತ್ರನ ವ್ಹೀಲಿಂಗ್ ಪುಂಡಾಟಕ್ಕೆ ವೃದ್ಧ ಬಲಿ
ಅತಿ ವೇಗವಾಗಿ ಬರುತ್ತಿದ್ದ ಮಹೇಂದ್ರ ಕಾರು ನಿಯಂತ್ರಣ ತಪ್ಪಿ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪಲ್ಟಿ ಹೊಡೆದಿದ್ದು, ಸ್ಥಳದಲ್ಲಿಯೇ ಕಿಶೋರ್ ಸಾವನ್ನಪ್ಪಿದ್ದಾರೆ. ನಂತರ ಇದ್ದಕ್ಕಿದ್ದಂತೆ ಕಾರು ಹೊತ್ತಿ ಉರಿದಿದ್ದು, ಬಳಿಕ ಅಗ್ನಿಶಾಮಕ ದಳದ (Fire Brigade) ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅಪಘಾತದಲ್ಲಿ ಕಾರಿನಲ್ಲಿದ್ದ ಉಳಿದ ನಾಲ್ಕು ಮಂದಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಮೈಸೂರಿನ (Mysuru) ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು, ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೋಳಿ ಫಾರಂ ಶೆಡ್‌ನಲ್ಲಿ ನಾಲ್ವರು ಮಲಗಿದ್ದಲ್ಲೇ ಅನುಮಾನಾಸ್ಪದ ಸಾವು
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]