ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರದ ಬಳಿ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಐವರು ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಶನಿವಾರ ರಾತ್ರಿ 10:30ರ ಸುಮಾರಿಗೆ ಲಾರಿವೊಂದು ಸ್ಕಾರ್ಪಿಯೋ ಕಾರಿಗೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲಿಯೇ ಐವರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದು, ಇದೀಗ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಕುಕನೂರು ತಾಲೂಕಿನ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ್ ಕುಟುಂಬದ ಜೊತೆ ಸಂಬಂಧಿಯ ಮಗನ ಬರ್ತ್ ಡೇ ಆಚರಿಸಲು ಕೊಪ್ಪಳಕ್ಕೆ ಬಂದಿದ್ದರು. ರಾತ್ರಿ ಹುಟ್ಟುಹಬ್ಬ ಮುಗಿಸಿಕೊಂಡು ಮರಳಿ ಬಿನ್ನಾಳ ಗ್ರಾಮಕ್ಕೆ ಬರುತ್ತಿದ್ದ ವೇಳೆ ಅಪಘಾತವಾಗಿದೆ. ಇದನ್ನೂ ಓದಿ: ಉದ್ಯಾನವನದಲ್ಲಿ ಕಾಡಾನೆ ಪ್ರತ್ಯಕ್ಷ – ದಿಕ್ಕಾಪಾಲಾದ ಪ್ರವಾಸಿಗರು
ಘಟನೆಯಲ್ಲಿ ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ (32), ಸಂಬಂಧಿ ಕಸ್ತೂರಮ್ಮ(20) ಮೃತಪಟ್ಟಿದ್ದು, ಚಾಲಕ ಹರ್ಷವರ್ಧನ, ಬಸವರಾಜ, ಪುಟ್ಟರಾಜ, ಭೂಮಿಕಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಡಿಕ್ಕಿ ಹೊಡೆದ ರಭಸಕ್ಕೆ ಸ್ಕಾರ್ಪಿಯೋ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಶವಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಗಿತ್ತು. ಸದ್ಯ ಸ್ಥಳಕ್ಕೆ ಕೊಪ್ಪಳ ಎಸ್‍ಪಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಯಾವುದೇ ಕಾರಣಕ್ಕೂ ಮೇಕೆದಾಟು ನಿರ್ಮಾಣಕ್ಕೆ ಅನುಮತಿ ನೀಡಲ್ಲ: ತಮಿಳುನಾಡು ಸರ್ಕಾರ