– ಮೂವರಿಗೆ ಗಂಭೀರ ಗಾಯ
– ಕಂಟೇನರ್, ಕಾರು ಸುಟ್ಟು ಕರಕಲು
ಬೆಂಗಳೂರು: ಕಂಟೇನರ್ ಲಾರಿ (Container Lorry) ಹಾಗೂ ಕಾರಿನ (Car) ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೆಂಕಿ ಹೊತ್ತಿಕೊಂಡು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ (Hoskote) ತಾಲೂಕಿನ ಹಲಸಹಳ್ಳಿ (Halasahalli) ಗ್ರಾಮದ ಬಳಿ ನಡೆದಿದೆ.
ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ತಗುಲಿ ಧಗಧಗನೆ ಹೊತ್ತಿ ಉರಿದಿದೆ. ಬೆಂಕಿ ತಗುಲಿ ಕಂಟೇನರ್ ಸಹ ಸುಟ್ಟುಕರಕಲಾಗಿದೆ. ಎರಡಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಸ್ಥಳೀಯ ವ್ಯಕ್ತಿಗಳ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. ಇದನ್ನೂ ಓದಿ: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ – ಇಬ್ಬರು ಸಾವು

ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದ ಮೂವರಿಗೆ ಗಂಭೀರ ಸುಟ್ಟ ಗಾಯಗಳಾಗಿದೆ. ಸದ್ಯ ಗಾಯಾಳುಗಳನ್ನು ಹೊಸಕೋಟೆ ನಗರದ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಹೊಸಕೋಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳ್ಳರ ಕೈಚಳಕ – 15 ಕ್ಕೂ ಹೆಚ್ಚು ಮೊಬೈಲ್ ಕಳ್ಳತನ ಕೇಸ್ ದಾಖಲು

