ಚಿಕ್ಕೋಡಿ: ಲಾರಿ (Lorry) ಹಾಗೂ ಕಾರು (Car) ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಳಗಾವಿ (Belagavi) ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಸಂಕೇಶ್ವರ – ಗೋಟುರ ರಸ್ತೆಯಲ್ಲಿ ನಡೆದಿದೆ.
ಮೂಲತಃ ಮಹಾರಾಷ್ಟ್ರದ ಪೂನಾ ಮೂಲದ ನಿವಾಸಿ ಹಣಮಂತ ಪಾಯಾಳ (55) ಮೃತ ದುರ್ದೈವಿ. ಗಾಯಗೊಂಡ ಗಾಯಾಳುಗಳನ್ನು ಚಿಕಿತ್ಸೆಗಾಗಿ ಬೆಳಗಾವಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ವಿಜಯಪುರ| ಮನೆಯ ಮೇಲ್ಛಾವಣಿ ಕುಸಿದು ಮಹಿಳೆ ಜೀವಂತ ಸಮಾಧಿ
ಘಟನಾ ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬೆಂಗಳೂರು| ಜಿಮ್ ವಾಟ್ಸಪ್ ಗ್ರೂಪ್‌ನಲ್ಲಿ ಕಿರಿಕ್ – ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ಬಾಡಿ ಬಿಲ್ಡರ್ಸ್

