– AK-47 ರೈಫಲ್, ಪಿಸ್ತೂಲ್ ಬಳಸಿ ಗುಂಡಿನ ದಾಳಿ
ಗೌಟೆಂಗ್: ಜೋಹಾನ್ಸ್ಬರ್ಗ್ನ ನೈಋತ್ಯದಲ್ಲಿರುವ (South Africa) ವೆಡೆಲಾದ ವೆಸ್ಟ್ ರಾಂಡ್ ಪ್ರದೇಶದಲ್ಲಿನ ಬಾರ್ವೊಂದರಲ್ಲಿ ತಡರಾತ್ರಿ ಏಕಾಏಕಿ ಗುಂಡಿನ ದಾಳಿ ನಡೆದಿದೆ. (Gun Attack) ದಾಳಿಯಲ್ಲಿ 17 ಜನರು ಹತ್ಯೆಗೀಡಾಗಿದ್ದು, 15 ಜನ ಗಾಯಗೊಂಡಿದ್ದಾರೆ.
ಘಟನೆಯಲ್ಲಿ 13 ಜನ ಪುರುಷರು ಮತ್ತು ನಾಲ್ವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾಳಿಯ ಹಿಂದಿನ ನಿಖರ ಕಾರಣ ತಿಳಿದುಬಂದಿಲ್ಲ ಎಂದು ದಕ್ಷಿಣ ಆಫ್ರಿಕಾದ ಪೊಲೀಸ್ ಇಲಾಖೆ ಎಕ್ಸ್ನಲ್ಲಿ ಪೋಸ್ಟ್ ಮೂಲಕ ತಿಳಿಸಿದೆ.
ಗೌಟೆಂಗ್ ಪ್ರಾಂತ್ಯದಲ್ಲಿ ಶನಿವಾರ ರಾತ್ರಿ 9:30 ರ ಸುಮಾರಿಗೆ ಈ ಘಟನೆ ನಡೆದಿದೆ. ದಾಳಿ ನಡೆಸಲು ಬಂದಿದ್ದ ಶಂಕಿತರು ಎಕೆ-47 ರೈಫಲ್ಗಳು ಮತ್ತು ಪಿಸ್ತೂಲ್ಗಳನ್ನ ಹೊಂದಿದ್ದರು ಎನ್ನಲಾಗಿದೆ. ಇದನ್ನೂ ಓದಿ: ಬೇಕೋ, ಬೇಡವೋ ರಾಜ್ಯದಲ್ಲಿ ಗ್ಯಾರಂಟಿ ಕೊಟ್ಟಿದ್ದೇವೆ, ಗ್ಯಾರಂಟಿ ಇಲ್ಲದಿದ್ದರೆ ಸಮಸ್ಯೆ ಆಗುತ್ತಿರಲಿಲ್ಲ: ಹೆಚ್ಸಿ ಬಾಲಕೃಷ್ಣ
ಶಂಕಿತರು ಬಾರ್ ಹೊರಗಡೆ ಮದ್ಯಪಾನ ಮಾಡುತ್ತಿದ್ದ ಗ್ರಾಹಕರ ಮೇಲೆ ಗುಂಡು ಹಾರಿಸಿದ್ದಾರೆ. ನಂತರ ಒಳಗೆ ನುಗ್ಗಿ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡೇಟಿನಿಂದ ಗಾಯಗೊಂಡ ಇತರ 15 ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಈ ಗುಂಡಿನ ದಾಳಿಯಲ್ಲಿ ಭಾಗಿಯಾಗಿದ್ದ 8 ಮಂದಿಯನ್ನು ಪತ್ತೆಹಚ್ಚಿ ಬಂಧಿಸಲು ದಕ್ಷಿಣ ಆಫ್ರಿಕಾ ಪೊಲೀಸ್ ಇಲಾಖೆ (SAPS) ಮುಂದಾಗಿದೆ. ಇದನ್ನೂ ಓದಿ: ನಾನು ಸಿಂಗಲ್ ಫೈಟರ್… ಗುಂಪು ಕಟ್ಟಿಕೊಂಡು ಹೋಗಲ್ಲ: ಡಿಕೆಶಿ

