ಹೊಸಕೋಟೆ ಪಟ್ಟಣಕ್ಕೆ ಮೆಟ್ರೊ ರೈಲು ಸಂಚಾರ ವಿಸ್ತರಿಸಿ: ಎಂಟಿಬಿ ನಾಗರಾಜ್ ಮನವಿ

Public TV
1 Min Read
MTB 1

ಬೆಂಗಳೂರು: ಹೊಸಕೋಟೆ ಪಟ್ಟಣಕ್ಕೆ ಮೆಟ್ರೊ ರೈಲು ಸಂಚಾರ ವಿಸ್ತರಿಸುವಂತೆ ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್ ಮನವಿ ಮಾಡಿದ್ದಾರೆ.

Namma Metro 8

ಬೆಂಗಳೂರಿನಲ್ಲಿಂದು ನಡೆದ ಮೈಸೂರು-ಕೆಂಗೇರಿ ವಿಸ್ತರಿತ ಮಾರ್ಗದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ ದೀಪ್ ಸಿಂಗ್ ಪುರಿ ಅವರಿಗೆ ಮುಖ್ಯಮಂತ್ರಿಗಳ ಮೂಲಕ ಎಂಟಿಬಿ ನಾಗರಾಜ್ ಮನವಿ ಸಲ್ಲಿಸಿದ್ದಾರೆ. ಇದನ್ನೂ ಓದಿ:ದೇಶದ ವಿವಿಧ ರಾಜ್ಯಗಳ ಮಂಗಳಸೂತ್ರ ವಿನ್ಯಾಸದ ಮಾಹಿತಿ 

MTB 1

ಹೊಸಕೋಟೆ ಪಟ್ಟಣ ಬೆಂಗಳೂರು ಹೊರವಲಯದಲ್ಲಿ ಅಂದರೆ ಬಿಬಿಎಂಪಿ ವ್ಯಾಪ್ತಿಯಿಂದ 10 ಕಿಮೀ ದೂರದಲ್ಲಿದೆ ಅಷ್ಟೇ. ಭಾರತದ ಸಿಲಿಕಾನ್ ವ್ಯಾಲಿ ವೈಟ್ ಫೀಲ್ಡ್ ಐಟಿ ಪಾರ್ಕ್ ಗೆ ತೀರ ಹತ್ತಿರದಲ್ಲಿದೆ. ವೈಟ್ ಫೀಲ್ಡ್ ಸುತ್ತ-ಮುತ್ತ ನೂರಾರು ಐಟಿ ಕಂಪನಿಗಳು ಬೀಡು ಬಿಟ್ಟಿವೆ. ವಾಣಿಜ್ಯ ಕಟ್ಟಡಗಳು, ಬೃಹತ್ ಕಟ್ಟಡಗಳಿದ್ದು ಲಕ್ಷಾಂತರ ಅಪಾರ್ಟ್‍ಮೆಂಟ್ ಗಳು ಇವೆ. ಪರಿಣಾಮ ಹೊಸಕೋಟೆ ಪಟ್ಟಣದ ಸುತ್ತ-ಮುತ್ತ ತೀವ್ರ ಸಂಚಾರದ ಒತ್ತಡ ನಿರ್ಮಾಣವಾಗಿದೆ. ಅಲ್ಲದೇ ಹೊಸಕೋಟೆ ಪಟ್ಟಣವು ಮಾಲೂರು ಕೈಗಾರಿಕಾ ಪ್ರದೇಶ ನಂದಗುಡಿ ಕೈಗಾರಿಕಾ ಪ್ರದೇಶ ಮತ್ತು ಕೋಲಾರ ಕೈಗಾರಿಕಾ ಪ್ರದೇಶಗಳ ಹೆಬ್ಬಾಗಿಲು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬದಲಿ ರಸ್ತೆಯು ಹೊಸಕೋಟೆ ತಾಲೂಕಿನ ಮೂಲಕ ಹಾದು ಹೋಗುತ್ತದೆ.

METRO 1

ಹೊಸಕೋಟೆ ಪಟ್ಟಣದಲ್ಲಿನ ಜೀವನ ಮಟ್ಟ ಬೆಂಗಳೂರು ನಗರಕ್ಕಿಂತ ಕಡಿಮೆ ಇರುವುದರಿಂದ ಬೆಂಗಳೂರಿನ ಉದ್ಯೋಗಿಗಳು ಬೆಂಗಳೂರು ಹೊರವಲಯ ಹಾಗೂ ಹೊಸಕೋಟೆ ಪಟ್ಟಣದಲ್ಲಿ ಭಾರೀ ಸಂಖ್ಯೆಯಲ್ಲಿ ವಾಸವಾಗಿದ್ದಾರೆ. ಅವರು ಬೆಂಗಳೂರಿಗೆ ತೆರಳಲು ಮೆಟ್ರೊ ರೈಲು ಸಂಚಾರ ಕಲ್ಪಿಸಿದರೆ ರಸ್ತೆ ಮಾರ್ಗದ ಮೇಲೆ ಇರುವ ಅತೀ ದೊಡ್ಡ ಒತ್ತಡವನ್ನು ತಪ್ಪಿಸಬಹುದು. ಹಾಗಾಗಿ, ಮೆಟ್ರೊ ರೈಲು ಮಾರ್ಗವನ್ನು ಹೊಸಕೋಟೆ ಪಟ್ಟಣದವರೆಗೆ ವಿಸ್ತರಿಸುವಂತೆ ಮನವಿ ಮಾಡುತ್ತೇನೆ ಎಂದು ತಮ್ಮ ಮನವಿ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ:ಮೈಸೂರು ರಸ್ತೆ To ಕೆಂಗೇರಿ – ಮೆಟ್ರೋ ಮಾರ್ಗ ಉದ್ಘಾಟನೆ

Share This Article
Leave a Comment

Leave a Reply

Your email address will not be published. Required fields are marked *