ಬೆಂಗಳೂರು: ಹೆದ್ದಾರಿಯಲ್ಲಿ ಕಾರು ಅಪಘಾತ (Car Accident) ಮಾಡಿ ಯುವಕನೋರ್ವನನ್ನು ಕೊಲೆ ಮಾಡಿ ಹಂತಕರು ಎಸ್ಕೇಪ್ ಆದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯಲ್ಲಿ ನಡೆದಿದೆ.
ಹೊಸಕೋಟೆ (Hoskote) ತಾಲೂಕಿನ ಗಂಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಭಾರ್ಗವ್ (24) ಕೊಲೆಯಾದ ಯುವಕ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ ಕೇಸ್: 18 ನಕಲಿ ಖಾತೆಗಳಿಗೆ ಹಣ ವರ್ಗಾವಣೆಯಾಗಿದ್ದು ಹೇಗೆ? ಇಂಚಿಂಚು ಮಾಹಿತಿ ಬಿಚ್ಚಿಟ್ಟ ED!
ಈತ ಕೋಲಾರ ಮೂಲದವನಾಗಿದ್ದು, ತಡರಾತ್ರಿ ಕೋಲಾರದಿಂದ ಹೊಸಕೋಟೆ ಕಡೆಗೆ ಕಾರಿನಲ್ಲಿ ಬರುತ್ತಿದ್ದ. ಈ ವೇಳೆ ಹಂತಕರು ಕಾರು ಚೇಸ್ ಮಾಡಿ ಬ್ರೇಕ್ ಹಾಕಿದ್ದಾರೆ. ಪರಿಣಾಮ ಕಾರಿನ ಮುಂಭಾಗ ಹಂತಕರ ಕಾರಿಗೆ ಡಿಕ್ಕಿಯಾಗಿದೆ. ಇದೇ ನೆಪದಲ್ಲಿ ಗಲಾಟೆ ಮಾಡಿ ಲಾಂಗು, ಮಚ್ಚಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹಿಮಾಚಲದಲ್ಲಿ ಆರ್ಥಿಕ ಸಂಕಷ್ಟ – ತೆರಿಗೆ ಪಾವತಿಸೋ ಮಂದಿಗೆ ಉಚಿತ ವಿದ್ಯುತ್ ಕಟ್
ಕೊಲೆ ನಂತರ ವಾಹನ ಸಮೇತ ಆರೋಪಿಗಳು ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ. ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಕೇಂದ್ರದ ತನಿಖಾ ಸಂಸ್ಥೆಗಳನ್ನು ರಾಜಕೀಯ ಅಸ್ತ್ರ ಮಾಡಿಕೊಳ್ಳಬಾರದು: ಪರಮೇಶ್ವರ್