ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ (Hoskote) ಪೊಲೀಸರು ಅಂತರರಾಜ್ಯ ಬೈಕ್ ಕಳ್ಳರ (Bike Theft) ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, 55 ಲಕ್ಷ ರೂಪಾಯಿ ಮೌಲ್ಯದ 50 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಆಂಧ್ರಪ್ರದೇಶ ಮೂಲದ ಪ್ರಸಾದ್ ಹಾಗೂ ಕೋಲಾರದ ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಗಳನ್ನು ಪೊಲೀಸರು ಜೈಲಿಗಟ್ಟಿದ್ದಾರೆ. ಬಂಧಿತರ ವಿರುದ್ಧ 8 ಪೊಲೀಸ್ ಠಾಣೆಗಳಲ್ಲಿ ಸುಮಾರು 45 ಕ್ಕೂ ಹೆಚ್ಚು ಬೈಕ್ ಕಳವು ಪ್ರಕರಣಗಳು ದಾಖಲಾಗಿವೆ. ಇದನ್ನೂ ಓದಿ: ಅತ್ಯಾಧುನಿಕ ತಂತ್ರಜ್ಞಾನ ಬಳಸಿ 3 ತಿಂಗಳಲ್ಲಿ ವಿಂಡ್ ಟನಲ್ ಕೆಳಸೇತುವೆ ಪೂರ್ಣಗೊಳಿಸಿ – ಮಹೇಶ್ವರ್ ರಾವ್
ಈ ಕಳ್ಳರು ಬೈಕ್‌ಗಳನ್ನು ಕದ್ದು, ಅವುಗಳನ್ನು ಗ್ರಾಮೀಣ ಭಾಗದ ಜನರಿಗೆ ಮಾರಾಟ ಮಾಡುತ್ತಿದ್ದರು. ಹೀಗೆ ಬಂದ ಹಣದಲ್ಲಿ ಮೋಜು ಮಸ್ತಿ ಮಾಡುತ್ತಿದ್ದರು. ಇದನ್ನೂ ಓದಿ: ಮಧ್ಯರಾತ್ರಿ ಸಾಮಾನ್ಯ ಮಹಿಳೆಯಂತೆ ರಸ್ತೆಯಲ್ಲಿ ಓಡಾಡಿದ ಮಹಿಳಾ ಪೊಲೀಸ್ – 3 ಗಂಟೆಯಲ್ಲಿ 40 ಪುರುಷರಿಂದ ಕಿರುಕುಳ
ಪೊಲೀಸರು ಪ್ರಕರಣದ ಬೆನ್ನತ್ತಿದ್ದಾಗ ಬೃಹತ್ ಸಂಖ್ಯೆಯ ಬೈಕ್ ಕಳವಾಗಿರುವುದು ಬೆಳಕಿಗೆ ಬಂದಿತ್ತು. ಹೊಸಕೋಟೆ ಕ್ರೈಂ ಕಾನ್ಸ್ಟೇಬಲ್ ಗೋಪಾಲ್ ಈ ಬೈಕ್ ಕಳ್ಳರ ಜಾಲ ಭೇದಿಸಿದರು. ಎಸ್ಪಿ ಚಂದ್ರಕಾಂತ್, ಡಿವೈಎಸ್ಪಿ ಮಲ್ಲೇಶ್, ಇನ್ಸ್ಪೆಕ್ಟರ್ ಗೋವಿಂದ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು. ಇದನ್ನೂ ಓದಿ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಅರ್ಧ ಕೆಜಿ ಚಿನ್ನಾಭರಣ, ನಗದು ಬೆಂಕಿಗಾಹುತಿ
ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಪೊಲೀಸ್ ತಂಡಕ್ಕೆ ಜಿಲ್ಲಾ ಪೊಲೀಸ್ ವತಿಯಿಂದ ನಗದು ಬಹುಮಾನ ಹಾಗೂ ಪ್ರಶಂಸನಾ ಪತ್ರವನ್ನು ಘೋಷಿಸಲಾಗಿದೆ. ಇದನ್ನೂ ಓದಿ: ಅರಣ್ಯ ಸಚಿವರಿಗೆ ಮುತ್ತಿಗೆ ಹಾಕಲು ಯತ್ನ – ಬಿಜೆಪಿ ಕಾರ್ಯಕರ್ತರು ಪೊಲೀಸರ ವಶಕ್ಕೆ

