ಮಂಗಳೂರು: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕುಮಾರಧಾರಾ ನದಿ ತುಂಬಿದ್ದು ನೀರಿನ ಮಟ್ಟ ಹೆಚ್ಚಾಗಿದೆ.
ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು, ಭಕ್ತರಿಗೆ ನದಿಗಿಳಿಯದಂತೆ ಸೂಚನೆ ನೀಡಲಾಗಿದೆ. ಇದರಿಂದಾಗಿ ಕ್ಷೇತ್ರಕ್ಕೆ ಬಂದ ಭಕ್ತರು ಸ್ನಾನಘಟ್ಟಕ್ಕೆ ಹೋಗಲಾಗದೆ ಮೇಲ್ಭಾಗದ ನೀರಿನಲ್ಲೇ ಸ್ನಾನ ಮಾಡಬೇಕಾಗಿದೆ. ಭಕ್ತಾದಿಗಳು ಸ್ನಾನಘಟ್ಟದ ಹೊರಗೆ ಬಂದಂತಹ ನೀರಿನಲ್ಲೇ ತೀರ್ಥಸ್ನಾನವನ್ನು ಮಾಡುತ್ತಿದ್ದಾರೆ.
Advertisement
Advertisement
ಉಪ್ಪಿನಂಗಡಿ -ಸುಬ್ರಹ್ಮಣ್ಯ ಸಂಪರ್ಕ ರಸ್ತೆಯ ಕಡಬ ಬಳಿಯ ಹೊಸ್ಮಠ ಸೇತುವೆಯೂ ನೀರಿನಿಂದ ಮುಳುಗಡೆಯಾಗಿದ್ದು, ಈ ರಸ್ತೆಯ ಮೂಲಕ ಸಂಚರಿಸುವ ಪ್ರಯಾಣಿಕರಿಗೆ ತೊಂದರೆಯಾಗಿದೆ.
Advertisement
ದಕ್ಷಿಣಕನ್ನಡ ಜಿಲ್ಲೆಯ ಪ್ರಮುಖ ನದಿಗಳಾದ ನೇತ್ರಾವತಿ ಹಾಗೂ ಕುಮಾರಧಾರದಲ್ಲಿ ನೀರಿನ ಮಟ್ಟ ಹೆಚ್ಚಿದ್ದು, ಈ ಮಳೆಗಾಲದಲ್ಲಿ ಮೊದಲ ಬಾರಿಗೆ ಮೈದುಂಬಿಕೊಂಡು ಹರಿಯುತ್ತಿದೆ.
Advertisement
ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡಿದ್ದ ಹೊಸ್ಮಠ ಸೇತುವೆ ಪ್ರತೀ ಮಳೆಗಾಲದಲ್ಲಿ ಹಲವು ಬಾರಿ ಮುಳುಗಡೆಯಾಗುತ್ತಿದೆ. ಇದರಿಂದ ರಸ್ತೆ-ಸಂಚಾರ ಹಾಗೂ ಶಾಲಾ ಕಾಲೇಜುಗಳಿಗೆ ಅಡಚಣೆಯಾಗುತ್ತಿದೆ. ಸದ್ಯ ಇದರ ಪಕ್ಕದಲ್ಲೇ ನೂತನ ಸೇತುವೆ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಳೆಯ ಸೇತುವೆ ಕಡೆಯಿಂದ ನೀರು ಹರಿಯಲು ಬಿಡಲಾಗುತ್ತಿದ್ದು, ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರೀ ಪ್ರಮಾಣದ ನೀರು ಹರಿದು ಇತ್ತೀಚೆಗಷ್ಟೇ ಹಳೆ ಸೇತುವೆ ಕುಸಿದಿತ್ತು.
ಭಕ್ತರಿಗೆ ಸೂಚನೆ: ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕುಮಾರಧಾರಾ ನದಿ ತುಂಬಿದ್ದು, ನೀರಿನ ಮಟ್ಟ ಹೆಚ್ಚಾಗಿದೆ. ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಕುಮಾರಧಾರಾ ಸ್ನಾನಘಟ್ಟ ಸಂಪೂರ್ಣ ಮುಳುಗಡೆಯಾಗಿದ್ದು ಭಕ್ತರಿಗೆ ನದಿಗಿಳಿಯದಂತೆ ಸೂಚನೆ ನೀಡಲಾಗಿದೆ. ಇದರಿಂದಾಗಿ ಕ್ಷೇತ್ರಕ್ಕೆ ಬಂದ ಭಕ್ತರು ಸ್ನಾನಘಟ್ಟಕ್ಕೆ ಹೋಗಲಾಗದೆ ಮೇಲ್ಭಾಗದ ನೆರೆನೀರಿನಲ್ಲೇ ಸ್ನಾನ ಮಾಡಬೇಕಾಗಿದೆ. ಸ್ನಾನಘಟ್ಟದ ಹೊರಗೆ ಬಂದಂತಹ ನೀರಿನಲ್ಲೇ ಭಕ್ತಾಧಿಗಳು ತೀರ್ಥಸ್ನಾನ ಮಾಡುತ್ತಿದ್ದಾರೆ.