Connect with us

Crime

ಚಿಕಿತ್ಸೆಗಾಗಿ ಬಂದ ರೋಗಿಯ ಪತ್ನಿಯ ಮೇಲೆ ಅತ್ಯಾಚಾರಕ್ಕೆ ಯತ್ನ

Published

on

ಕೋಲಾರ: ಚಿಕಿತ್ಸೆಗೆಂದು ಬಂದಿದ್ದ ರೋಗಿಯ ಪತ್ನಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಜಿಲ್ಲಾಸ್ಪತ್ರೆಯ ಬರ್ನಿಂಗ್ ವಾರ್ಡ್ ನಲ್ಲಿ ಶನಿವಾರ ರಾತ್ರಿ ನಡೆದಿದೆ.

ಜಿಲ್ಲಾಸ್ಪತ್ರೆಯ ಡಿ ಗ್ರೂಪ್ ನೌಕರ ಸುರೇಶ್ ಎಂಬಾತನಿಂದ ಈ ಕೃತ್ಯ ನಡೆದಿದ್ದು, ಈ ಘಟನೆಯ ಬಗ್ಗೆ ವಿಚಾರ ತಿಳಿದ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಶಿವಕುಮಾರ್ ಆರೋಪಿ ಸುರೇಶ್‍ನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಬಂಗಾರಪೇಟೆ ಮೂಲದ ರೋಗಿ ವಾಜಿದ್ ಎಂಬವರಿಗೆ ಸುಟ್ಟ ಗಾಯಗಳಾಗಿದ್ದು, ಜೊತೆಗೆ ಪತ್ನಿ ನಾಜೀಮ್ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆರೋಪಿ ಸುರೇಶ್ ವಾಜಿಮ್‍ಗೆ ಇಂಜೆಕ್ಷನ್ ಮಾಡಿದ್ದನು. ವಾಜೀಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮಲಗಿದ್ದು, ಈ ವೇಳೆ ಮಹಿಳೆಯನ್ನು ರೂಮ್‍ಗೆ ಕರೆದುಕೊಂಡು ಹೋಗಿ ಅಸಭ್ಯವಾಗಿ ವರ್ತಿಸಿ ಅತ್ಯಾಚಾರಕ್ಕೆ ಯತ್ನ ನಡೆಸಿದ್ದಾನೆ.

ನೊಂದ ಮಹಿಳೆ ಕೋಲಾರ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಭಯಗೊಂಡ ಆರೋಪಿ ಸುರೇಶ್ ಪರಾರಿಯಾಗಿದ್ದಾನೆ. ಪೊಲೀಸರು ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ.

Click to comment

Leave a Reply

Your email address will not be published. Required fields are marked *

www.publictv.in