ಮೈಸೂರು: ರಾಜ್ಯದಲ್ಲಿ ಡೆಂಗ್ಯೂ (Dengue) ಸೋಂಕು ಪ್ರಕರಣಗಳ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದೆ. ಮೈಸೂರು (Mysuru) ಜಿಲ್ಲೆಯಲ್ಲಿ ಡೆಂಗ್ಯೂ ಸೋಂಕಿಗೆ ಎರಡನೇ ಬಲಿಯಾಗಿರುವುದು ಆತಂಕ ಮೂಡಿಸಿದೆ.
ಜಯದೇವ ಹೃದ್ರೋಗ ಆಸ್ಪತ್ರೆ ಡಾಟಾ ಎಂಟ್ರಿ ಆಪರೇಟರ್ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸಿಬ್ಬಂದಿ ಲಲಿತಾ ಎಂಬವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಸರ್ಕಾರ ಡೆಂಗ್ಯೂ ಎಮರ್ಜೆನ್ಸಿ ಘೋಷಣೆ ಮಾಡಲಿ: ಆರ್.ಅಶೋಕ್ ಆಗ್ರಹ
Advertisement
Advertisement
ಡೆಂಗ್ಯೂ ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೈಸೂರು ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಸದ್ಯ 35 ಮಂದಿ ಈ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಹುಣಸೂರು ಸಮುದಾಯ ಆರೋಗ್ಯಾಧಿಕಾರಿ ಡೆಂಗ್ಯೂನಿಂದ ಸಾವಿಗೀಡಾಗಿದ್ದರು.
Advertisement
Advertisement
ರಾಜ್ಯದಲ್ಲಿ ಒಟ್ಟು 301 ಡೆಂಗ್ಯೂ ಸಕ್ರಿಯ ಪ್ರಕರಣಗಳಿವೆ. ಇಂದು ಒಂದೇ ದಿನ 159 ಹೊಸ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಸೋಂಕಿಗೆ ಇಂದು ಮೈಸೂರಿನ ಒಬ್ಬರು ಸೇರಿ ಇಬ್ಬರು ಬಲಿಯಾಗಿದ್ದಾರೆ. ಈವರೆಗೆ ಪ್ರಕರಣಗಳ ಸಂಖ್ಯೆ 7,165 ಕ್ಕೆ ಏರಿಕೆಯಾಗಿದೆ. ಒಟ್ಟು ಸಾವಿನ ಸಂಖ್ಯೆ 6 ಕ್ಕೆ ಏರಿದೆ. ಇದನ್ನೂ ಓದಿ: ಮುಡಾ ಪ್ರಕರಣ ಸಿಬಿಐ ಅಥವಾ ನ್ಯಾಯಾಧೀಶರಿಂದ ತನಿಖೆಯಾಗಲಿ: ಬೊಮ್ಮಾಯಿ