ಮುಂಬೈ: ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ವ್ಯಕ್ತಿಯೋರ್ವ, ತನ್ನ ಪತ್ನಿಗೆ ಚುಚ್ಚುಮದ್ದಿನ ಮೂಲಕ ಡೆಡ್ಲಿ ಡ್ರಗ್ಸ್ ನೀಡಿ ಕೊದು ನಂತರ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಯತ್ನಿಸಿರುವ ಘಟನೆ ಮಹಾರಾಷ್ಟ್ರದ (Maharashtra) ಪುಣೆ (Pune) ಜಿಲ್ಲೆಯಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಪ್ರಿಯಾಂಕಾ ಎಂದು ಗುರುತಿಸಲಾಗಿದ್ದು, ನವೆಂಬರ್ 14 ರಂದು ಈ ಘಟನೆ ನಡೆದಿದೆ. ಗಂಭೀರ ಸ್ಥಿತಿಯಲ್ಲಿದ್ದ ಪ್ರಿಯಾಂಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಕದ್ರಿ ದೇವಸ್ಥಾನ ನಮ್ಮ ಟಾರ್ಗೆಟ್ – ಮಂಗಳೂರು ಸ್ಫೋಟದ ಹೊಣೆ ಹೊತ್ತುಕೊಂಡ ಉಗ್ರ ಸಂಘಟನೆ
Advertisement
Advertisement
ಆರೋಪಿ ಸ್ವಪ್ನಿಲ್ ಸಾವಂತ್ ಐದು ತಿಂಗಳ ಹಿಂದೆಯಷ್ಟೇ ಪ್ರಿಯಾಂಕಾ ಅವರನ್ನು ಮದುವೆಯಾಗಿ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದನು. ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸ್ವಪ್ನಿಲ್ ಸಾವಂತ್ ತನ್ನ ಸಹೋದ್ಯೋಗಿ ನರ್ಸ್ ಜೊತೆ ಅನೈತಿಕ ಸಂಬಂಧ ಹೊಂದಿದ್ದು, ಆಕೆಯನ್ನು ಮದುವೆಯಾಗಲು ಪ್ಲ್ಯಾನ್ ಮಾಡಿಕೊಂಡಿದ್ದ ಹೀಗಾಗಿ ತನ್ನ ಪತ್ನಿಯನ್ನು ಹತ್ಯೆಗೈದಿದ್ದಾನೆ. ಇದೀಗ ಆತನನ್ನು ಬಂಧಿಸಲಾಗಿದೆ ಎಂದು ಪೌಡ್ ಪೊಲೀಸ್ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಬೇರೆ ಜಾತಿಯ ವ್ಯಕ್ತಿಯನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆ ಮಾಡಿದ ತಾಯಿ
Advertisement
Advertisement
ಘಟನೆ ನಂತರ ಪ್ರಿಯಾಂಕಾ ಸಹಿ ಹಾಕಿರುವ ಸೂಸೈಡ್ ನೋಟ್ ಪತ್ತೆಯಾಗಿತ್ತು. ಆದರೆ ತನಿಖೆಯ ವೇಳೆ ಸಾವಂತ್ ಕೆಲಸ ಮಾಡುತ್ತಿದ್ದ ಆಸ್ಪತ್ರೆಯಿಂದ ವೆಕುರೋನಿಯಂ ಬ್ರೋಮೈಡ್, ನೈಟ್ರೊಗ್ಲಿಸರಿನ್ ಮತ್ತು ಲಾಕ್ಸ್ 2% ಸೇರಿದಂತೆ ಕೆಲವು ಡ್ರಗ್ಸ್‌ಗಳಿರುವ ಚುಚ್ಚುಮದ್ದುಗಳನ್ನು ಕದ್ದು ಪತ್ನಿಯನ್ನು ಕೊಂದಿರುವ ವಿಚಾರ ಬೆಳಕಿಗೆ ಬಂದಿದೆ. ಇದೀಗ ಸಾವಂತ್ ವಿರುದ್ಧ ಕೌಟುಂಬಿಕ ದೌರ್ಜನ್ಯ ಮತ್ತು ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ವಿವಿಧ ಸೆಕ್ಷನ್‍ಗಳ ಅಡಿಪ್ರಕರಣ ದಾಖಲಿಸಲಾಗಿದೆ ಎಂದು ಇನ್ಸ್‌ಪೆಕ್ಟರ್ ಮನೋಜ್ ಯಾದವ್ ತಿಳಿಸಿದ್ದಾರೆ.