LatestMain PostNational

ಆಸ್ಪತ್ರೆ ದಾಖಲಾಗಿದ್ದ ಪದ್ಮಶ್ರೀ ಪುರಸ್ಕೃತೆಗೆ ಬಲವಂತವಾಗಿ ನೃತ್ಯ ಮಾಡಿಸಿದ ಸಾಮಾಜಿಕ ಕಾರ್ಯಕರ್ತೆ

ಭುವನೇಶ್ವರ: ಒಡಿಶಾದ ಪರಾಜ ಬುಡಕಟ್ಟು ಸಮುದಾಯದ ಪದ್ಮಶ್ರೀ ಪುರಸ್ಕೃತೆ ಕಮಲಾ ಪುಜಾರಿ ಇತ್ತೀಚೆಗೆ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಡಿಸ್ಚಾರ್ಜ್ ಮಾಡುವುದಕ್ಕೂ ಮೊದಲು ಸಾಮಾಜಿಕ ಕಾರ್ಯಕರ್ತೆಯೊಬ್ಬರು ಬಲವಂತವಾಗಿ ನೃತ್ಯ ಮಾಡಿಸಿರುವ ಘಟನೆ ಕಟಕ್ ನಗರದ ಆಸ್ಪತ್ರೆಯಲ್ಲಿ ನಡೆದಿದೆ.

ಸರ್ಕಾರಿ ಆಸ್ಪತ್ರೆಯ ಐಸಿಯುನಲ್ಲಿ ವೃದ್ಧ ಪದ್ಮಶ್ರೀ ಪುರಸ್ಕೃತೆ ನೃತ್ಯ ಮಾಡುತ್ತಿರುವ ವಿಡಿಯೋ ವೈರಲ್ ಆದ ಬಳಿಕ ಘಟನೆ ಬೆಳಕಿಗೆ ಬಂದಿದೆ. ವೀಡಿಯೋದಲ್ಲಿ ಸಾಮಾಜಿಕ ಕಾರ್ಯಕರ್ತೆ ಮಮತಾ ಬೆಹೆರಾ ಕೂಡ ಅವರೊಂದಿಗೆ ನೃತ್ಯ ಮಾಡುತ್ತಿರುವುದು ಕಂಡುಬಂದಿದೆ.

ನಾನು ಅನಾರೋಗ್ಯದಿಂದ ಬಳಲುತ್ತಿದ್ದು, ನನಗೆ ನೃತ್ಯ ಮಾಡಲು ಇಷ್ಟವಿರಲಿಲ್ಲ. ಆದರೆ ನನಗೆ ನೃತ್ಯ ಮಾಡಲು ಒತ್ತಾಯಿಸಲಾಗಿತ್ತು. ನಾನು ಪದೇ ಪದೇ ನಿರಾಕರಿಸಿದರೂ ಅವರು ಕೇಳಲಿಲ್ಲ. ಎಂದು ಕಮಲಾ ಪೂಜಾರಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಇದರ ಬೆನ್ನಲ್ಲೇ ಪರಾಜ ಬುಡಕಟ್ಟು ಸಮುದಾಯದ ಸದಸ್ಯರು ಸಾಮಾಜಿಕ ಕಾರ್ಯಕರ್ತೆಯ ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಬ್ರಿಟಿಷರ ಕಾಲದ ಚಿನ್ಹೆಗೆ ಕೊಕ್ – ನೌಕಾಪಡೆಗೆ ಶಿವಾಜಿಯ ಧ್ವಜ ಸೇರ್ಪಡೆ

ಕಮಲಾ ಪುಜಾರಿ ಅವರನ್ನು ಬಲವಂತವಾಗಿ ನೃತ್ಯ ಮಾಡಿಸಿದ ಸಾಮಾಜಿಕ ಕಾರ್ಯಕರ್ತೆಯ ವಿರುದ್ಧ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಲು ವಿಫಲವಾದರೆ, ನಮ್ಮ ಸದಸ್ಯರು ಬೀದಿಗಿಳಿಯುತ್ತಾರೆ ಎಂದು ಬುಡಕಟ್ಟು ಸಮುದಾಯ ಪರಜಾ ಸಮಾಜದ ಅಧ್ಯಕ್ಷ ಹರೀಶ್ ಮುದುಳಿ ಎಚ್ಚರಿಕೆ ನೀಡಿದ್ದಾರೆ.

ಸಾವಯವ ಕೃಷಿಯನ್ನು ಉತ್ತೇಜಿಸಿದ ಹಾಗೂ ಭತ್ತ ಸೇರಿದಂತೆ ವಿವಿಧ ಬೆಳೆಗಳ 100 ಕ್ಕೂ ಹೆಚ್ಚು ದೇಶೀಯ ಬೀಜಗಳನ್ನು ಸಂರಕ್ಷಿಸಿದ್ದಕ್ಕಾಗಿ 2019 ರಲ್ಲಿ ಕಮಲಾ ಪುಜಾರಿ ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಲಾಗಿತ್ತು. ಇತ್ತೀಚೆಗೆ ಅವರು ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, ಕಟಕ್‌ನ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಪೈಲಟ್‍ಗಳ ಮುಷ್ಕರದಿಂದ ವಿಮಾನ ಸಂಚಾರ ರದ್ದು – ದೆಹಲಿ ವಿಮಾನ ನಿಲ್ದಾಣದಲ್ಲಿ ಜನಜಂಗುಳಿ

Live Tv

Leave a Reply

Your email address will not be published.

Back to top button