ನವದೆಹಲಿ: ಆಸ್ಪತ್ರೆಗಳಲ್ಲಿ ರೋಗಿಗಳನ್ನು ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸುವ ಕುರಿತು ಕೇಂದ್ರ ಸರ್ಕಾರವು (Central Government) ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಸಾಮಾನ್ಯವಾಗಿ ರೋಗಿಯ ಸ್ಥಿತಿ ಗಂಭಿರ ಇದ್ದರೆ ವೈದ್ಯರು ಐಸಿಯುನಲಿ ಚಿಕಿತ್ಸೆ ಕೊಡಿಸುತ್ತಾರೆ. ಆದರೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿಯಲ್ಲಿ ಇನ್ನು ಮುಂದೆ ಈ ರೀತಿ ಮಾಡುವಂತಿಲ್ಲ. ರೋಗಿ ಅಥವಾ ಆತನ ಕುಟುಂಬಸ್ಥರು ಒಪ್ಪಿಗೆ ನೀಡಿದರೆ ಮಾತ್ರ ಆತನಿಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಬಹುದಾಗಿದೆ. ಬಲವಂತವಾಗಿ ಯಾವುದೇ ರೋಗಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡುವಂತಿಲ್ಲ.
Advertisement
Advertisement
ಕೇಂದ್ರದ ಆರೋಗ್ಯ ಸಚಿವಾಲಯ ಹೊರಡಿಸಿರುವ ಈ ಮಾರ್ಗಸೂಚಿಗಳನ್ನು 24 ಮಂದಿ ತಜ್ಞರು ಚರ್ಚಿಸಿ ಬಿಡುಗಡೆ ಮಾಡಿದ್ದಾರೆ. ರೋಗಿಗೆ ಹೆಚ್ಚಿನ ಚಿಕಿತ್ಸೆ ಪ್ರಯೋಜನವಿಲ್ಲದಿದ್ದಲ್ಲಿ ಅಥವಾ ಯಾವುದೇ ಚಿಕಿತ್ಸೆಯಿಂದ ರೋಗಿಯ ಆರೋಗ್ಯದಲ್ಲಿ ಚೇತರಿಕೆ ಕಾಣಲು ಸಾಧ್ಯವಾಗದಿದ್ದಲ್ಲಿ ಆತ ಅಥವಾ ಆಕೆಗೆ ಐಸಿಯುನಲ್ಲಿ ಚಿಕಿತ್ಸೆ ಕೊಡಿಸುವುದು ವ್ಯರ್ಥ ಎಂದು ಹೇಳಲಾಗಿದೆ.
Advertisement
Advertisement
ಸಾಂಕ್ರಾಮಿಕ ರೋಗಗಳು, ವಿಪತ್ತು ಸಂದರ್ಭಗಳಲ್ಲಿ ರೋಗಿಯನ್ನು ಐಸಿಯುಗೆ ದಾಖಲಿಸಬಹುದು. ರೋಗಿಯ ಅಂಗಾಂಗ ವೈಫಲ್ಯ, ಅಂಗಾಂಗ ಕಸಿ ಅಥವಾ ಹದಗೆಡುತ್ತಿರುವ ವೈದ್ಯಕೀಯ ಸ್ಥಿತಿಯನ್ನು ಅವಲೋಕಿಸಿ ಐಸಿಯುಗೆ ಪ್ರವೇಶ ನೀಡಬೇಕು. ಅಲ್ಲದೆ ರೋಗಿಯ ಪ್ರಜ್ಞಾಹೀನತೆ, ಹೆಮೊಡೈನಮಿಕ್ ಅಸ್ಥಿರತೆ, ಉಸಿರಾಟದ ಸಮಸ್ಯೆ ಹೀಗೆ ತೀವ್ರವಾಗಿ ಅನಾರೋಗ್ಯ ಪೀಡಿತರಾಗಿದ್ದರೆ ಮಾತ್ರ ಐಸಿಯುನಲ್ಲಿ ಚಿಕಿತ್ಸೆ ಕೊಡಿಸಬಹುದು ಎಂದು ರೂಲ್ಸ್‌ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ನಾನು ಸತ್ತೇ ಹೋದೆ ಅಂದ್ಕೊಂಡೆ – ಅವಘಡಕ್ಕೀಡಾದ ವಿಮಾನದೊಳಗಿದ್ದ ಪ್ರಯಾಣಿಕ
ಒಟ್ಟಾರೆಯಾಗಿ ರೋಗಿಯ ಸಂಬಂಧಿಕರು ಐಸಿಯುನಲ್ಲಿ ಚಿಕಿತ್ಸೆ ಬೇಡ ಎಂದು ಹೇಳಿದರೆ ಅಂತಹ ರೋಗಿಗಳನ್ನು ಐಸಿಯುಗೆ ದಾಖಲಿಸಿಕೊಳ್ಳುವಂತಿಲ್ಲ. ಇನ್ನು ಮಾರ್ಗಸೂಚಿ ಪ್ರಕಾರ, ಐಸಿಯುಗೆ ಸೇರಿಸುವ ಮೊದಲು ರಕ್ತದೊತ್ತಡ, ನಾಡಿ ಬಡಿತ, ಹೃದಯ ಬಡಿತ, ಆಮ್ಲಜನಕ ಹೀರಿಕೊಳ್ಳುವ ಸಾಮರ್ಥ್ಯ, ಮೂತ್ರ ವಿಸರ್ಜನೆಯ ಪ್ರಮಾಣ, ನರದ ಸ್ಥಿತಿಗತಿ ಮೊದಲಾದವುಗಳ ಪರಿಶೀಲನೆಯ ಬಳಿಕವೇ ರೋಗಿಯನ್ನು ಐಸಿಯುಗೆ ದಾಖಲಿಸಿಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.