ಚಿಕ್ಕಬಳ್ಳಾಪುರ: ಕಲ್ಯಾಣಿಯಲ್ಲಿ ಈಜಲು ಹೋದ ಹಾಸ್ಟೆಲ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗುಡಿಬಂಡೆ ಪಟ್ಟಣದ ಹೊರವಲಯದ ಬಿಳಿಗಿರಿರಂಗನ ಕಲ್ಯಾಣಿಯಲ್ಲಿ ನಡೆದಿದೆ.
ಗುಡಿಬಂಟೆ ಪಟ್ಟಣದ ಐಟಿಐ ಕಾಲೇಜಿನಲ್ಲಿ (Chikkaballapur ITI College) ವ್ಯಾಸಂಗ ಮಾಡುತ್ತಿದ್ದು 17 ವರ್ಷದ ವೆಂಕಟಾಚಲಪತಿ ಮೃತ ವಿದ್ಯಾರ್ಥಿಯಾಗಿದ್ದಾನೆ. ಅಂದಹಾಗೆ ಮೂಲತಃ ಗೌರಿಬಿದನೂರು ತಾಲೂಕಿನ ಹೊಸೂರು ಹೋಬಳಿಯ ಭಕ್ತರಹಳ್ಳಿ ಗ್ರಾಮದವನಾಗಿದ್ದ ಮೃತ ವೆಂಕಟಾಚಲಪತಿ ಗುಡಿಬಂಡೆ ಪಟ್ಟಣದ ಸರ್ಕಾರಿ ಬಾಲಕರ ವಸತಿನಿಲಯದ (Hostel Student) ವಿದ್ಯಾರ್ಥಿಯಾಗಿದ್ದ.
ಕಾಲೇಜಿನಿಂದ ಹಾಸ್ಟೆಲ್‌ಗೆ ಬಂದಿದ್ದ ವೆಂಕಟಾಚಲಪತಿ ಊಟ ಮುಗಿಸಿ ಹಾಸ್ಟೆಲ್ ಸಮೀಪವೇ ಇರುವ ಕಲ್ಯಾಣಿಯಲ್ಲಿ ಈಜಲು ತೆರಳಿದ್ದು ಈ ವೇಳೆ ಕಲ್ಯಾಣಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಘಟನೆ ಬಗ್ಗೆ ತಿಳಿದು ಜಿಲ್ಲಾಧಿಕಾರಿ ಪಿ.ಎನ್ ರವಿಂದ್ರ ಸಮೇತ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ಹವಾಮಾನ ವೈಪರೀತ್ಯ – ಕೊಡಗಿನಲ್ಲಿ ವೈರಲ್ ಫೀವರ್, ಒಂದೇ ದಿನ 200 ರಿಂದ 300 ಜನರಿಗೆ ಚಿಕಿತ್ಸೆ
ಇಡೀ ರಾತ್ರಿ ಹುಡುಕಾಟ ನಡೆಸಿದ್ದು ಮುಂಜಾನೆ ಮೃತ ಯುವಕನ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: 10ನೇ ತರಗತಿ ಗಣಿತ, ವಿಜ್ಞಾನ ವಿಷಯಗಳ ಪಾಸಿಂಗ್ ಮಾರ್ಕ್ಸ್ 20ಕ್ಕೆ ಇಳಿಸಿದ ಮಹಾರಾಷ್ಟ್ರ