ಚಂಡೀಗಢ: ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ (Chandigarh University) ಹಾಸ್ಟೆಲ್‌ನಲ್ಲಿ (Hostel) ವಿದ್ಯಾರ್ಥಿನಿಯೊಬ್ಬಳು (Student) ಇತರ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳನ್ನು ಸೋರಿಕೆ (Leaked Videos) ಮಾಡಿದ್ದು, ಇದರ ಹಿನ್ನೆಲೆ ವಿಶ್ವವಿದ್ಯಾಲಯದಲ್ಲಿ ಭಾರೀ ಪ್ರತಿಭಟನೆ ಭುಗಿಲೆದ್ದಿದೆ.
ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋವನ್ನು ವಿದ್ಯಾರ್ಥಿನಿಯೊಬ್ಬಳು ಸೆರೆಹಿಡಿದು, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದಾಗಿ ಆರೋಪಿಸಲಾಗಿದೆ. ಈ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ವೀಡಿಯೋವನ್ನು ಹರಿಬಿಟ್ಟ ವಿದ್ಯಾರ್ಥಿನಿಯನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.
Advertisement
I humbly request all the students of Chandigarh University to remain calm, no one guilty will be spared.
It’s a very sensitive matter & relates to dignity of our sisters & daughters.
We all including media should be very very cautious,it is also test of ours now as a society.
— Harjot Singh Bains (@harjotbains) September 18, 2022
Advertisement
ಈ ಘಟನೆಯಿಂದಾಗಿ ನೊಂದ ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ವದಂತಿಗಳು ಹಬ್ಬುತ್ತಿವೆ. ಆದರೆ ಈ ವದಂತಿಯನ್ನು ನಿರಾಕರಿಸಿದ ವಿಶ್ವವಿದ್ಯಾಲಯದ ಅಧಿಕಾರಿಗಳು, ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಯೊಬ್ಬಳು ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಯುಪಿ ಸಚಿವರಿಗೆ 500 ರೂ. ದಂಡ
Advertisement
Advertisement
ಇದೀಗ ನಡೆಯುತ್ತಿರುವ ಭಾರೀ ಪ್ರತಿಭಟನೆಯ ಬಗ್ಗೆ ಶಾಂತಿ ಕಾಪಾಡುವಂತೆ ಪಂಜಾಬ್ ಶಿಕ್ಷಣ ಸಚಿವರು ವಿದ್ಯಾರ್ಥಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಸಮಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಶಾಂತವಾಗಿರಬೇಕು. ನಾವು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳುತ್ತೇವೆ. ಇದು ಅತ್ಯಂತ ಸೂಕ್ಷ್ಮ ವಿಚಾರ. ನಮ್ಮ ಸಹೋದರಿಯರು ಹಾಗೂ ಹೆಣ್ಣುಮಕ್ಕಳ ಘನತೆಗೆ ಸಂಬಂಧಿಸಿರುವುದಾಗಿದೆ. ಸಾಮಾಜಿಕ ಮಾಧ್ಯಮಗಳ ಬಗ್ಗೆ ನಾವು ತುಂಬಾ ಜಾಗರೂಕರಾಗಿರಬೇಕು ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸ್ಮಾರ್ಟ್ ಫೋನ್ ಬಳಕೆದಾರರೇ ಎಚ್ಚರ! – ಎಂಟ್ರಿಕೊಟ್ಟಿದೆ ರಷ್ಯಾದ ಸೋವಾ-5.0 ವೈರಸ್