– ಮಚ್ಚು ಹಿಡಿದು ಪ್ರವಾಸಿಗರಿಗೆ ಬೆದರಿಕೆ ಹಾಕಿದ್ದವನಿಂದಲೇ ದೂರು
ಮಡಿಕೇರಿ: ಪ್ರವಾಸಿಗರ ತಂಡದೊಂದಿಗೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆ ಮಾಡಿಕೊಂಡ ಹೋಟೆಲ್ ಮಾಲೀಕನೊಬ್ಬ, ಬಳಿಕ ತಮ್ಮ ಮೇಲೆಯೇ ಹಲ್ಲೆ ನಡೆದಿದೆ ಎಂದು ದೂರು ನೀಡಿ ಪೊಲೀಸರನ್ನೇ ದಿಕ್ಕು ತಪ್ಪಿಸಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಬೆಂಗಳೂರು ಮೂಲದ ಯಾಸಿನ್ ಕುಟುಂಬ ಜೂನ್ ೨ರಂದು ಅಬ್ಬಿ ಜಲಪಾತ ವೀಕ್ಷಣೆಗೆ ಮಡಿಕೇರಿಗೆ ಬಂದಿತ್ತು. ವಾಪಸ್ ತೆರಳುವ ವೇಳೆ ಮಾರ್ಗ ಮಧ್ಯೆ ಇರುವ ಖಾಸಗಿ ಹೋಟೆಲ್‌ಗೆ ಊಟಕ್ಕಾಗಿ ತೆರಳಿದ್ದಾರೆ. ಇದನ್ನೂ ಓದಿ: ಕಾರಿನೊಳಗೆ ಉಸಿರುಗಟ್ಟಿ 3 ವರ್ಷದ ಮಗು ಸಾವು
ಈ ವೇಳೆ ಹೋಟೆಲ್‌ನಲ್ಲಿದ್ದ ಪ್ರವಾಸಿಗರು ಚಿಪ್ಸ್ ತೆಗೆದುಕೊಂಡು ತಿಂದ ವಿಚಾರಕ್ಕೆ ಹೋಟೆಲ್ ಮಾಲೀಕ ಆಗ್ನೇಶ್ ಕೋಪಗೊಂಡಿದ್ದಾನೆ. ಯಾರ ಅನುಮತಿ ಪಡೆದು ಚಿಪ್ಸ್ ತೆಗೆದುಕೊಂಡಿದ್ದೀರಿ ಎಂದು ಪ್ರಶ್ನಿಸಿ ಗಲಾಟೆ ಮಾಡಿದ್ದಾನೆ. ಇದರಿಂದ ಬೇಸರಗೊಂಡ ಪ್ರವಾಸಿಗರು ಊಟ ಮಾಡದೆ ವಾಪಸ್ ಹೋಗುವುದಾಗಿ ಹೇಳಿದ್ದಾರೆ. ಇದರಿಂದ ಕೋಪಗೊಂಡ ಹೋಟೆಲ್ ಮಾಲೀಕ ಪ್ರವಾಸಿಗರೊಂದಿಗೆ ವಾಗ್ವಾದ ನಡೆಸಿದ್ದಾನೆ. ಅಲ್ಲದೆ, ಹೋಟೆಲ್‌ನಲ್ಲಿ ಇದ್ದ ಮಚ್ಚು ತೆಗೆದುಕೊಂಡು ಪ್ರವಾಸಿಗರನ್ನು ಬೆದರಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.
ಬಳಿಕ ಅದೇ ಹೋಟೆಲ್ ಮಾಲೀಕ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ, ತನ್ನ ಹಾಗೂ ಪತ್ನಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ದೂರು ನೀಡಿದ್ದಾನೆ. ನಂತರ ಜಿಲ್ಲಾ ಆಸ್ಪತ್ರೆಗೆ ತೆರಳಿ ದಾಖಲಾಗಿದ್ದಾನೆ. ಇದನ್ನೂ ಓದಿ:ಮಾಜಿ ಎಂಎಲ್‌ಸಿ ಕಿಡ್ನ್ಯಾಪ್ ಕೇಸ್ – 3 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ ನಾಲ್ವರು ಅರೆಸ್ಟ್
ದೂರಿನ ಆಧಾರದ ಮೇಲೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಪ್ರವಾಸಿಗರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಆದರೆ, ಪ್ರಕರಣದ ಸಂಪೂರ್ಣ ಸತ್ಯಾಸತ್ಯತೆ ಪರಿಶೀಲಿಸದೇ ಪೊಲೀಸರು ಎಫ್‌ಐಆರ್ ದಾಖಲಿಸಿ ಎಡವಟ್ಟು ಮಾಡಿಕೊಂಡಿದ್ದಾರೆ. ಈ ವಿಚಾರ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.













