ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ರಾಜ್ಯದ ಜನದಟ್ಟಣೆ ಪ್ರದೇಶವಾಗಿದೆ. ITBT ಕಂಪನಿಗಳ ಸಾಮ್ರಾಜ್ಯ, ಜನನಿಬಿಡ ಪ್ರದೇಶವೂ ಆಗಿರುವುದರಿಂದ ಇಲ್ಲಿ ದಿನದ 24 ಗಂಟೆಗಳ ಕಾಲ ಹೋಟೆಲ್ ತೆರೆಯಲು ಅವಕಾಶ ನೀಡಬೇಕು ಎಂದು ಹೋಟೆಲ್ ಮಾಲೀಕರ ಸಂಘ (Hotel Owners Association) ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರಿಗೆ ಮನವಿ ಮಾಡಿದೆ.
ಬ್ರ್ಯಾಂಡ್ ಬೆಂಗಳೂರು (Brand Bengaluru) ಅಭಿವೃದ್ಧಿಗೆ ಸಲಹೆ ನೀಡಲು ವೆಬ್‌ಪೋರ್ಟಲ್ ಆರಂಭಿಸಿದ ಬೆನ್ನಲ್ಲೇ ಹೋಟೆಲ್ ಮಾಲೀಕರ ನಿಯೋಗ ಡಿಕೆಶಿ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದೆ. 24 ಗಂಟೆಯೂ ಹೋಟೆಲ್ (Hotel) ತೆರೆಯಲು ಇರುವ ಸಮಸ್ಯೆಗಳನ್ನ ಇತ್ಯರ್ಥ ಮಾಡಿ, ರಾತ್ರಿ ವೇಳೆಯೂ ಹೋಟೆಲ್ ತೆರೆಯಲು ಅವಕಾಶ ನೀಡಬೇಕೆಂದು ಕೋರಿದೆ.
Advertisement
Advertisement
ಹೋಟೆಲ್ ಉದ್ಯಮಕ್ಕೆ ಕೈಗಾರಿಕಾ ಸ್ಥಾನಮಾನ ನೀಡಬೇಕು. 24 ಗಂಟೆಯೂ ಹೋಟೆಲ್ ತೆರಯಲು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿ ಇದೆ. ಆದರೆ ಪೋಲಿಸ್ ಇಲಾಖೆ ಅವಕಾಶ ಕೊಡ್ತಿಲ್ಲ. ಪೋಲಿಸ್ ಇಲಾಖೆ ಕೇವಲ ರಾತ್ರಿ 1 ಗಂಟೆಯವರೆಗೆ ಮಾತ್ರ ಹೋಟೆಲ್ ತೆರೆಯಲು ಅವಕಾಶ ನೀಡಿದೆ. ಆದ್ದರಿಂದ ನಮಗೂ ಕೇರಳ, ದೆಹಲಿ, ತಮಿಳುನಾಡು, ಗುಜರಾತ್ ಮಾದರಿಯಲ್ಲಿ 24 ಗಂಟೆಯೂ ಹೋಟೆಲ್ ತೆರೆಯಲು ಅವಕಾಶ ನೀಡಬೇಕು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕುರುಕಲು ತಿಂಡಿಗೆ ಹಠ ಹಿಡಿಯೋ ಮಕ್ಕಳಿಗಾಗಿ ಮಾಡಿ ರಿಬ್ಬನ್ ಸೇವ್
Advertisement
Advertisement
ಹಾಲು, ತರಕಾರಿ, ಹೂವು, ಹಣ್ಣು, ದಿನಪತ್ರಿಕೆ ಮಾರುವವರು, ಪೋಲಿಸ್, ವೈದ್ಯಕೀಯ ಸಿಬ್ಬಂದಿ, ಶಿಫ್ಟ್ ನಲ್ಲಿ ಕೆಲಸ ಮಾಡುತ್ತಾರೆ. ಅವರಿಗೆ ರಾತ್ರಿ ಆಹಾರ ಅಗತ್ಯವಿದೆ. ಜನರಿಗೆ ಕುಡಿಯುವ ನೀರು, ಶೌಚಾಲಯಗಳನ್ನು ಉಚಿತವಾಗಿ ಪೂರೈಸುತ್ತೇವೆ. ರಾತ್ರಿ ಹೋಟೆಲ್ ತೆರೆಯುವುದರಿಂದ ಹೆಚ್ಚಿನ ಉದ್ಯೋಗ ಸೃಷ್ಟಿಯಾಗಲಿದೆ. ಪ್ರವಾಸೋದ್ಯಮಕ್ಕೂ ಹೆಚ್ಚು ಒತ್ತು ನೀಡಿದಂತಾಗುತ್ತದೆ. ಆದ್ದರಿಂದ ಸರ್ಕಾರ 24 ಗಂಟೆ ಹೋಟೆಲ್ ತೆರೆಯಲು ಅನುವುಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.
ಇದಕ್ಕೆ ಸಕಾರಾತ್ಮವಾಗಿ ಸ್ಪಂದಿಸಿರುವ ಡಿ.ಕೆ ಶಿವಕುಮಾರ್ ಅವರು, ಶೀಘ್ರದಲ್ಲೇ ಸಭೆ ಕರೆಯುತ್ತೇವೆಂದು ತಿಳಿಸಿರುವುದಾಗಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ.ರಾವ್ ತಿಳಿಸಿದ್ದಾರೆ. ಇದನ್ನೂ ಓದಿ: ಲೋಕಸಭೆ ಗೆಲ್ಲಲು ವಿರೋಧ ಪಕ್ಷಗಳು ಸಜ್ಜು – ಬಿಜೆಪಿ ಸೋಲಿಸಲು ಇಂದು ಬಿಹಾರದಲ್ಲಿ ಹೈವೋಲ್ಟೇಜ್ ಸಭೆ