ಧಾರವಾಡ: ಹುಬ್ಬಳ್ಳಿಯಲ್ಲಿ (Hubballi) ಜ.24ರಂದು ವಸತಿ ಇಲಾಖೆಯಿಂದ 3000 ಮನೆಗಳಿಗೆ ಹಕ್ಕು ಪತ್ರ ವಿತರಣೆ ಹಾಗೂ 1800 ಮನೆಗಳ ಹಸ್ತಾಂತರ ಕಾರ್ಯಕ್ರಮ ನಡೆಯಲಿದ್ದು, ಈ ವಿಷಯವಾಗಿ ವಸತಿ ಸಚಿವ ಜಮೀರ್ ಅಹ್ಮದ್ ಅವರು ಧಾರವಾಡ ಜಿಲ್ಲಾ ಹಂತದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರೊಂದಿಗೆ ಧಾರವಾಡ ಜಿಲ್ಲಾ ಪಂಚಾಯ್ತಿ ಸಭಾಭವನದಲ್ಲಿ ಜಂಟಿ ಸಭೆ ನಡೆಸಿದ ಜಮೀರ್, ಹುಬ್ಬಳ್ಳಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ ಸುಮಾರು 4,600 ಜನರಿಗೆ ಹಕ್ಕು ಪತ್ರ ನೀಡಲಾಗುವುದು. ಈ ಕಾರ್ಯಕ್ರಮಕ್ಕೆ ಅಧಿಕಾರಿಗಳ ವ್ಯವಸ್ಥಿತ ರೂಪುರೇಷೆ ಸಿದ್ಧಪಡಿಸಬೇಕು. ಜಿಲ್ಲೆಯ ಎಲ್ಲ ಅಧಿಕಾರಿಗಳೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು ಎಂದರು. ಇದನ್ನೂ ಓದಿ: ಲಿವ್-ಇನ್ ಗೆಳತಿ ಹತ್ಯೆ ಮಾಡಿ, ಮೃತದೇಹ ಬಾಕ್ಸ್‌ನಲ್ಲಿಟ್ಟು ಬೆಂಕಿಯಿಟ್ಟ ವಿವಾಹಿತ
ಮಲ್ಲಿಕಾರ್ಜುನ ಖರ್ಗೆ, ಸಿಎಂ, ಡಿಸಿಎಂ ಈ ಕಾರ್ಯಕ್ರಮಕ್ಕೆ ಬರಲಿದ್ದಾರೆ. ಸುಮಾರು 2 ಲಕ್ಷ ಜನ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಒಟ್ಟು 42,000 ಮನೆಗಳ ಪೈಕಿ 1,008 ಮನೆಗಳನ್ನು ಹುಬ್ಬಳ್ಳಿಯಲ್ಲಿ ಕೊಡುತ್ತಿದ್ದೇವೆ. ತುಮಕೂರಿನಲ್ಲಿ 1,000, ಬಳ್ಳಾರಿಯಲ್ಲಿ 2,500 ಯಾದಗಿರಿಯಲ್ಲಿ 1,000ಮನೆಗಳಿವೆ. ಆಯಾ ಜಿಲ್ಲೆಗಳಲ್ಲಿ ಜ.24 ರಂದು ಮನೆಗಳ ಹಸ್ತಾಂತರ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸೈಡ್ ಕೊಡಲಿಲ್ಲ ಎಂಬ ಕಾರಣಕ್ಕೆ ನಕಲಿ ಗನ್ ತೋರಿಸಿ ಬೆದರಿಕೆ – ಮೂವರು ಅರೆಸ್ಟ್
ನರೇಗಾ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಕರೆದ ವಿಶೇಷ ಅಧಿವೇಶನ ಸಂಬಂಧ ಪ್ರತಿಕ್ರಿಯಿಸಿದ ಅವರು, ನರೇಗಾ ವಿಚಾರದಲ್ಲಿ ಕೇಂದ್ರ ಸರ್ಕಾರ ಹಣ ಕೊಡಬೇಕು. ಶೇ.90ರಷ್ಟು ಕೂಲಿ ಹಣವನ್ನು ಕೇಂದ್ರ ಸರ್ಕಾರ ಕೊಡಬೇಕಿದೆ ಎಂದರು. ಇದನ್ನೂ ಓದಿ: ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ – ವಿಡಿಯೋ ವೈರಲ್
ಸಭೆಯಲ್ಲಿ ಶಾಸಕರಾದ ಪ್ರಸಾದ್ ಅಬ್ಬಯ್ಯ, ಎನ್.ಹೆಚ್.ಕೋನರಡ್ಡಿ, ಎಸ್.ಎಫ್.ಜಕ್ಕಪ್ಪನವರ, ಒಳಚರಂಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು. ಸಭೆಗೂ ಮುನ್ನ ಜಮೀರ್ ಹಾಗೂ ಸಂತೋಷ್ ಲಾಡ್ ಅವರು ಧಾರವಾಡ ಸರ್ಕೀಟ್ ಹೌಸ್‌ನಿಂದ ಜಿಲ್ಲಾ ಪಂಚಾಯ್ತಿವರೆಗೂ ನಡೆದುಕೊಂಡೇ ಬಂದರು. ಇದನ್ನೂ ಓದಿ: ನೂರಕ್ಕೆ ನೂರು ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಾರೆ: ಬೋಸರಾಜು

