ಲಕ್ನೋ: ಸಿಲಿಂಡರ್ ಸ್ಫೋಟಗೊಂಡು (Cylinder Blast) ಎರಡು ಅಂತಸ್ತಿನ ಮನೆಯೊಂದು ಕುಸಿದ ಪರಿಣಾಮ ಕನಿಷ್ಠ ನಾಲ್ವರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ (Uttar Pradesh) ಫತೇಹ್‌ಪುರ (Fatehpur) ಜಿಲ್ಲೆಯ ಮಲ್ವಾನ್ ಪಟ್ಟಣದಲ್ಲಿ ಸೋಮವಾರ ಸಂಜೆ ನಡೆದಿದೆ.
ಗಾಯಗೊಂಡ ಮೂವರ ಪೈಕಿ ಇಬ್ಬರು ಅಪಾಯದಿಂದ ಪಾರಾಗಿದ್ದು, ಮತ್ತೊಬ್ಬರಿಗೆ ಶೇ.90ರಷ್ಟು ಸುಟ್ಟ ಗಾಯಗಳಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಹಣ್ಣು ಮತ್ತು ತರಕಾರಿ ವ್ಯಾಪಾರಿ ಸುರೇಶ್ ಗುಪ್ತಾ ಅಲಿಯಾಸ್ ಚುನ್ನಾರ್ ಅವರ ಮನೆಯಲ್ಲಿ ಸಂಜೆ ಸುಮಾರು 5 ಗಂಟೆಗೆ ಊಟ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಮನ್ಯು ಮಾಂಗ್ಲಿಕ್ ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆ ಎಚ್ಚರಿಕೆ
ಸ್ಫೋಟದ ತೀವ್ರತೆಗೆ ಎರಡು ಅಂತಸ್ತಿನ ಕಟ್ಟಡ ಸಂಪೂರ್ಣವಾಗಿ ಕುಸಿದಿದೆ. ಮನೆಯಲ್ಲಿದ್ದವರು ಅವಶೇಷಗಳಡಿ ಸಿಲುಕಿಕೊಂಡಿದ್ದು, ಸ್ಫೋಟದ ಪರಿಣಾಮ ಸುತ್ತಮುತ್ತಲಿನ ಕೆಲವು ಮನೆಗಳಿಗೂ ಹಾನಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಅವಶೇಷಗಳಡಿ ಸಿಲುಕಿದ್ದ ಏಳು ಮಂದಿಯನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ಚಾಮರಾಜನಗರ | ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು
ಆದರೆ ಚಿಕಿತ್ಸೆ ಫಲಕಾರಿಯಾಗದೆ ನಾಲ್ವರು ಮೃತಪಟ್ಟಿದ್ದಾರೆ. ಮೃತರಲ್ಲಿ ಮೂವರು, 18 ವರ್ಷದ ಯುವಕ ಹಾಗೂ ಇಬ್ಬರು ಹದಿಹರೆಯದವರು ಸೇರಿದ್ದಾರೆ. ಮೃತಪಟ್ಟವರೆಲ್ಲರೂ ಪುರುಷರಾಗಿದ್ದು, ಅವರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಫೋಟದ ನಿಖರ ಕಾರಣವೇನು ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ದರ್ಶನ್‌ಗೆ ಬಿಗ್ ಶಾಕ್- ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ಮಾಫಿ ಸಾಕ್ಷ್ಯ ದಾಖಲು

