ಕೊಪ್ಪಳ: ಕಳೆದ 2 ದಿನಗಳಿಂದ ಸುರಿದ ಧಾರಾಕಾರ ಮಳೆಗೆ ಮನೆಯೊಂದು ಕುಸಿದು ಬಿದ್ದು, 20 ದಿನದ ಹಸುಗೂಸು (Infant) ಹಾಗೂ ವೃದ್ಧೆ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಕೊಪ್ಪಳ (Koppala) ಜಿಲ್ಲೆಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಜೀರಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಮನೆ ಕುಸಿತದಿಂದ (House Collapse) ಹಸುಗೂಸು ಹಾಗೂ ವೃದ್ಧೆ ಫಕೀರಮ್ಮ (60) ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಗ್ಗಿನ ಜಾವ ಎಲ್ಲರೂ ಮಲಗಿದ್ದ ವೇಲೆ ದುರ್ಘಟನೆ ನಡೆದಿದೆ. ಇದನ್ನೂ ಓದಿ: ಆಡಿ ಕಾರು, ಬೈಕ್ ಮುಖಾಮುಖಿ ಡಿಕ್ಕಿ – ಬೈಕ್ ಸವಾರ ಸ್ಥಳದಲ್ಲೇ ಸಾವು
ಬಾಣಂತಿ ಕನಕಮ್ಮಳಿಗೆ ಗಾಯಗಳಾಗಿದ್ದು, ಅವರನ್ನು ಗಂಗಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆಯ ಪತಿ ಸದ್ಯ ಮನೆಯ ಹೊರಗಡೆ ಮಲಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ