ಕಲಬುರಗಿ: ತಡರಾತ್ರಿ ಮನೆಯೊಂದರ ಮೇಲ್ಛಾವಣಿ ಕುಸಿದ ಪರಿಣಾಮ ಬಾಲಕಿಯೊಬ್ಬಳು ಸಾವನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭಾಗೋಡೆ ಗ್ರಾಮದಲ್ಲಿ ನಡೆದಿದೆ.
ಮೇಲ್ಛಾವಣಿ ಕುಸಿದ ಪರಿಣಾಮ ಪ್ರಿಯಾಂಕಾ(11) ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮನೆಯಲ್ಲಿದ್ದ ಪ್ರಿಯಾಂಕಾನ ಅಜ್ಜಿ ಸೀತಮ್ಮ(75), ತಾಯಿ ಸಮುಂಗಲ(40), ಅಣ್ಣ ಶಿವಾನಂದ(18), ಅಕ್ಕ ಶಿವಲೀಲಾ(13) ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದಾರೆ.
Advertisement
Advertisement
ಮಂಗಳವಾರ ಮನೆಯಲ್ಲಿ ಎಲ್ಲರೂ ಮಲಗಿದ್ದ ವೇಳೆ ತಡರಾತ್ರಿ ಸುಮಾರು 3 ಗಂಟೆ ಹೊತ್ತಿಗೆ ಈ ಅವಘಡ ಸಂಭವಿಸಿದೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಚಿತ್ತಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
ಈ ಘಟನೆ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv