ಕೋಲಾರ: ಭಾರೀ ಮಳೆಗೆ (Heavy Rain) ಮನೆಯ ಗೋಡೆ ಕುಸಿದು (Wall Collapse), ಮನೆಯಲ್ಲಿದ್ದ 7 ಮಂದಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಕೋಲಾರ (Kolar) ಜಿಲ್ಲೆಯ ಕೆಜಿಎಫ್ (KGF) ನಗರದಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಸುರಿದ ಭಾರೀ ಮಳೆಗೆ ಕೆಜಿಎಫ್‌ನ ಮಾರಿಕುಪ್ಪಂನ ಕೃಷ್ಣಮೂರ್ತಿ ಎಂಬವರ ಮನೆಯ ಒಂದು ಭಾಗದ ಗೋಡೆ ಸಂಪೂರ್ಣ ಕುಸಿದಿದೆ. ಅಲ್ಲದೇ ಮಳೆ ಹಾಗೂ ಗಾಳಿಯ ಅಬ್ಬರಕ್ಕೆ ರಾಬರ್ಟ್ ಸನ್ ಪೇಟೆಯಲ್ಲಿ ಬೃಹತ್ ಮರಗಳು ಧರೆಗುರುಳಿವೆ. ಇದನ್ನೂ ಓದಿ: ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ – ಓರ್ವ ಸಾವು, 21 ಮಂದಿಗೆ ಗಾಯ
ಮಳೆ ಅವಾಂತರ ಆದರೂ ತಹಶೀಲ್ದಾರ್ ಹಾಗೂ ನಗರಸಭೆ ಆಯುಕ್ತರು ಸ್ಥಳಕ್ಕೆ ಭೇಟಿ ನೀಡಿಲ್ಲ. ಈ ಹಿನ್ನೆಲೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ – ತಪ್ಪಿದ ಅನಾಹುತ
