ಬೆಳಗಾವಿ: ಭಾರೀ ಮಳೆಗೆ (Rain) ಮನೆಯ ಗೋಡೆ ಕುಸಿದು ಮೂರು ವರ್ಷದ ಮಗು ಮೃತಪಟ್ಟ ಘಟನೆ ಗೋಕಾಕ್ (Gokak) ನಗರದ ಮಹಲಿಂಗೇಶ್ವರ ಕಾಲೋನಿಯಲ್ಲಿ ಇಂದು (ಸೋಮವಾರ) ಮುಂಜಾನೆ ನಡೆದಿದೆ.
ಮೃತ ಮಗುವನ್ನು ಕೀರ್ತಿ ನಾಗೇಶ್ ಪೂಜಾರಿ (3) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ನಾಲ್ಕು ವರ್ಷದ ಬಾಲಕಿ ಗಾಯಗೊಂಡಿದ್ದಾಳೆ. ಅಕ್ಕ – ತಂಗಿ ರೂಮ್‌ನಲ್ಲಿ ಮಲಗಿದ್ದ ವೇಳೆ ಗೋಡೆ ಕುಸಿದಿದೆ. ಪರಿಣಾಮ ಒಂದು ಮಗು ಸ್ಥಳದಲ್ಲೇ ಸಾವಿಗೀಡಾಗಿದೆ. ಘಟನೆಯ ವೇಳೆ ಮನೆಯ ಮತ್ತೊಂದು ರೂಮ್‌ನಲ್ಲಿ ಮಗುವಿನ ತಂದೆ ತಾಯಿ ಮಲಗಿದ್ದರು ಎಂದು ತಿಳಿದು ಬಂದಿದೆ. ಇದನ್ನೂ ಓದಿ: 2 ಮಕ್ಕಳಾದ ಬಳಿಕ ಮತ್ತೊಂದು ಲವ್ – ಸುಪಾರಿ ನೀಡಿ ಪ್ರೀತಿಸಿ ಮದುವೆಯಾದ ಗಂಡನನ್ನೇ ಕೊಂದಳು!
ಗಾಯಗೊಂಡ ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಬಾಲಕಿಯ ಶವ ಗೋಕಾಕ್ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಶಿಪ್ಟ್ ಮಾಡಲಾಗಿದೆ. ಸ್ಥಳಕ್ಕೆ ಗೋಕಾಕ್ ಶಹರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಿಪ್ಪರಗಿ ಜಲಾಶಯದಿಂದ 40 ಸಾವಿರ ಕ್ಯುಸೆಕ್ ನೀರು ಬಿಡುಗಡೆ – ಕೃಷ್ಣ ನದಿಗೆ ಇಳಿಯದಂತೆ ಎಚ್ಚರಿಕೆ