ಕೋಲಾರ: ಕಳೆದ ರಾತ್ರಿ ಸುರಿದ ಧಾರಾಕಾರ ಮಳೆಗೆ (Rain) ಕೋಲಾರದ (Kolar) ಕೆಜಿಎಫ್ (KGF) ನಗರದಲ್ಲಿ ಭಾರೀ ಅವಾಂತರ ಸೃಷ್ಟಿಯಾಗಿದೆ. ಹಲವೆಡೆ ತಗ್ಗು ಪ್ರದೇಶಗಳಲ್ಲಿನ ಮನೆಗಳ ಒಳಗೂ ನೀರು ನುಗ್ಗಿದೆ.
ಕೆಜಿಎಫ್ ನಗರದ ಉರಿಗಾಂಪೇಟೆ, ಎಂ.ಬ್ಲಾಕ್, ಐ ಬ್ಲಾಕ್ ಸೇರಿದಂತೆ ಹಲವೆಡೆ ಮಳೆಯಿಂದ ಅವಾಂತರ ಸೃಷ್ಟಿಯಾಗಿದೆ. ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ರಾತ್ರಿಯಿಡೀ ಜನ ಪರದಾಡಿದ್ದಾರೆ. ಚರಂಡಿ ಹಾಗೂ ಕಾಲುವೆ ಒತ್ತುವರಿಯಿಂದ ಈ ಅವ್ಯವಸ್ಥೆ ನಿರ್ಮಾಣವಾಗಿದೆ ಎಂದು ಜನ ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಸ್ಕೂಟರ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ – ಹಬ್ಬ ಮುಗಿಸಿ ಬೆಂಗ್ಳೂರಿಗೆ ಹೊರಟಿದ್ದ ಮೂವರು ದುರ್ಮರಣ
ಮಳೆಯಿಂದ ಇಷ್ಟೆಲ್ಲಾ ಅವಾಂತರ ಸೃಷಗಟಿಯಾದರೂ ಸ್ಥಳಕ್ಕೆ ನಗರಸಭೆ ಸಿಬ್ಬಂದಿ ಭೇಟಿ ನೀಡಿಲ್ಲ. ಅಧಿಕಾರಿಗಳು ಈ ಬಗ್ಗೆ ಗಮನಕೊಡುತ್ತಿಲ್ಲ ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಗಣೇಶನ ಮೂರ್ತಿ ತರಲು ಹೋಗುತ್ತಿದ್ದಾಗ ಬೈಕ್ ಅಪಘಾತ – ಸವಾರ ದುರ್ಮರಣ

