ಶಿವಮೊಗ್ಗ: ಮದುವೆಯಾಗಿ (Marriage) ಒಂದೂವರೆ ವರ್ಷಕ್ಕೆ ವಿವಾಹಿತೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ನಡೆದಿದೆ.
ಮೃತ ಗೃಹಿಣಿಯನ್ನು ಸಂಗೀತ (24) ಎಂದು ಗುರುತಿಸಲಾಗಿದೆ. ಶಿಕಾರಿಪುರ ತಾಲೂಕಿನ ಉಡುಗಣಿ ಗ್ರಾಮದ ಸಂಗೀತ ಹಾಗೂ ಶಿರಾಳಕೊಪ್ಪದ ಹರೀಶ್ ಕಳೆದ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು. ವಿವಾಹದ ಸಂದರ್ಭದಲ್ಲಿ ಹುಡುಗಿಯ ತಂದೆ ಚಿನ್ನಾಭರಣ ಹಾಗೂ ಹಣವನ್ನು ವರದಕ್ಷಿಣೆಯಾಗಿ ನೀಡಿದ್ದರು. ಆದರೂ ಹೆಚ್ಚಿನ ವರದಕ್ಷಿಣೆ (Dowry) ತರುವಂತೆ ಗಂಡನ ಮನೆಯವರು ಆಗಾಗ ಮೃತ ಸಂಗೀತಾಳಿಗೆ ಕಿರುಕುಳ ನೀಡುತ್ತಿದ್ದರು. ಗಂಡನ (Husband) ಮನೆಯವರ ಕಿರುಕುಳ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಂಗೀತ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಮೈಸೂರು ರಿಂಗ್ ರಸ್ತೆ – ಬೀದಿ ದೀಪಗಳ MCBಯನ್ನೇ ಕದ್ದ ಕಳ್ಳರು
Advertisement
Advertisement
ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಅನಿಸಿದರೂ, ಮೃತಳ ದೇಹದ ಮೇಲೆ ಗಾಯಗಳಾಗಿವೆ. ಹೀಗಾಗಿ ಪತಿ ಹಾಗೂ ಆತನ ಕುಟುಂಬಸ್ಥರೇ ಕೊಲೆ ಮಾಡಿ ನೇಣು ಹಾಕಿದ್ದಾರೆ ಎಂಬುದು ಸಂಗೀತ ಪೋಷಕರ ಆರೋಪವಾಗಿದೆ. ಘಟನೆ ಕುರಿತು ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಂತರ ಆರೋಪಿ ಪತಿ ಹರೀಶ್ ಪೊಲೀಸರಿಗೆ ಶರಣಾಗಿದ್ದಾನೆ. ಪೊಲೀಸರ ತನಿಖೆಯ ನಂತರವಷ್ಟೇ ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಬಹಿರಂಗವಾಗಬೇಕಿದೆ. ಇದನ್ನೂ ಓದಿ: ಲೇಡಿ PSI ಕಿರುಕುಳ ಆರೋಪ- ಡೆತ್‌ನೋಟ್ ಬರೆದಿಟ್ಟು ಯುವಕ ನಾಪತ್ತೆ