ಕೋಲಾರ: ತನ್ನಿಬ್ಬರು ಮಕ್ಕಳೆದುರೇ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಜಿಲ್ಲೆಯ ಬಂಗಾರಪೇಟೆ ಪಟ್ಟಣದ ಬೋವಿ ನಗರದಲ್ಲಿಂದು ಈ ದುರ್ಘಟನೆ ನಡೆದಿದ್ದು, ವೀಣಾ (35) ತನ್ನಿಬ್ಬರ ಮಕ್ಕಳೆದುರೇ ನೇಣಿಗೆ ಶರಣಾಗಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗುತ್ತಿದೆ.
Advertisement
ನಡೆದಿದ್ದೇನು?
ಇಂದು ಗಂಡ ಬೆಂಗಳೂರಿಗೆ ಕೆಲಸಕ್ಕೆಂದು ತೆರಳಿದ್ದು, ಈ ವೇಳೆ ಮನೆಯಲ್ಲಿ ಮಕ್ಕಳೊಂದಿಗೆ ಇದ್ದ ವೀಣಾ ಮಕ್ಕಳು ಹೊರಗೆ ಆಟವಾಡುತ್ತಿದ್ದ ವೇಳೆ ನೇಣಿಗೆ ಕೊರಳೊಡ್ಡಿದ್ದಾರೆ. ತಾಯಿ ನೇಣು ಬಿಗಿದುಕೊಂಡು ನರಳಾಡುತ್ತಿರುವುದನ್ನು ಕಂಡ ಇಬ್ಬರು ಮಕ್ಕಳು ಜೋರಾಗಿ ಕಿರುಚಿದ್ದಾರೆ. ಮಕ್ಕಳ ಕೂಗಾಟ ಕೇಳಿದ ಸ್ಥಳೀಯರು ವೀಣಾ ರಕ್ಷಣೆಗೆ ಮುಂದಾಗಿದ್ದಾರೆ.
Advertisement
ನೇಣಿಗೆ ಕೊರಳೊಡ್ಡಿದ ವೀಣಾರನ್ನು ರಕ್ಷಣೆ ಮಾಡಿದ ಸ್ಥಳೀಯರು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ನಡೆಸಿದ್ದು, ಆದರೆ ಮಾರ್ಗ ಮಧ್ಯೆ ಅವರು ಸಾವನ್ನಪ್ಪಿದ್ದಾರೆ. ವೀಣಾರ ಸಾವಿನ ವಿಚಾರ ತಿಳಿದು ಸಂಬಂಧಿಕರು ಆಸ್ಪತ್ರೆಗೆ ಬಂದಿದ್ದು, ಆಕ್ರಂದನ ಮುಗಿಲುಮುಟ್ಟಿದೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
Advertisement
ಸ್ಥಳಕ್ಕೆ ಬಂಗಾರಪೇಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.