ತುಮಕೂರು: ಗೃಹಿಣಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಪತಿ ವಿರುದ್ಧವೇ ಪೋಷಕರು ಕೊಲೆ ಆರೋಪ ಮಾಡಿರುವ ಘಟನೆ ನಡೆದಿದೆ ತುಮಕೂರು (Tumakuru) ತಾಲೂಕಿನ ಯಲ್ಲಾಪುರದಲ್ಲಿ ನಡೆದಿದೆ.
ಮೃತ ಗೃಹಿಣಿಯನ್ನು ಮಾಗಡಿ ತಾಲೂಕಿನ ತಾವರೆಕೆರೆ ಹೊನ್ನಗನಹಟ್ಟಿ ಮೂಲದ ಸುಷ್ಮಿತಾ (24) ಎಂದು ಗುರುತಿಸಲಾಗಿದೆ.
ಸುಷ್ಮಿತಾ ಮಂಗಳವಾರ ರಾಮನಗರ ಜಿಲ್ಲೆಯ ಮಾಗಡಿಯಲ್ಲಿರುವ ಚಿಕ್ಕಪ್ಪನ ಮನೆಗೆ ಹೋಗಿದ್ದರು. ನಿನ್ನೆ ಖುಷಿಯಾಗಿ ಗಂಡನ ಮನೆಯಾದ ಯಲ್ಲಾಪುರಕ್ಕೆ ವಾಪಸ್ ಬಂದಿದ್ದರು ಎಂದು ಸಂಬಂಧಿಕರು ತಿಳಿಸಿದ್ದಾರೆ.
ನಿನ್ನೆ ಸಂಜೆ ಮನೆಯಲ್ಲಿ ಗಲಾಟೆಯಾಗಿದೆ, ಆಸ್ಪತ್ರೆಗೆ ಬನ್ನಿ ಎಂದು ಸುಷ್ಮಿತಾ ಸಂಬಂಧಿಕರಿಗೆ ಪತಿ ಕಡೆಯಿಂದ ಕರೆ ಬಂದಿದೆ. ಸಂಬಂಧಿಕರು ಆಸ್ಪತ್ರೆಗೆ ಬಂದು ನೋಡಿದಾಗ ಸುಷ್ಮಿತಾ ಸಾವನ್ನಪ್ಪಿದ್ದರು.
ಪತಿಯೇ ಕೊಲೆ ಮಾಡಿ ಬಳಿಕ ನೇಣು ಬಿಗಿದಿದ್ದಾನೆ ಎಂದು ಮೃತಳ ತಾಯಿ ಆರೋಪಿಸಿ ದೂರು ನೀಡಿದ್ದಾರೆ. ಪತ್ನಿ ನೇಣು ಬಿಗಿದುಕೊಂಡಿದ್ದಾಳೆ ಎಂದು ಹೇಳಿ ಪತಿ ಶ್ರೀನಿವಾಸ್ ಆಸ್ಪತ್ರೆಗೆ ತಂದಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಸಾಹುಕಾರ್ ಶಿವಶಂಕರಪ್ಪ 10 ಕೋಟಿ ಅವ್ಯವಹಾರ; ರಿಯಲ್ ಎಸ್ಟೇಟ್ ಉದ್ಯಮಿ ಮನೆ ಮೇಲೆ ED ದಾಳಿ
ಈ ಸಂಬಂಧ ತುಮಕೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಸುಷ್ಮಿತಾ ಪತಿ ಶ್ರೀನಿವಾಸ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಶ್ರೀನಿವಾಸ್ ಅಂತರಸನಹಳ್ಳಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ತುಮಕೂರು ಮಹಿಳಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.ಇದನ್ನೂ ಓದಿ: ಪ್ಯಾಕೇಜ್ಡ್ ಡ್ರಿಂಕಿಂಗ್ ವಾಟರ್ ಬಾಟಲ್ ತಪಾಸಣೆಗೆ ಖಾದರ್ ಸೂಚನೆ
