ಹಾವೇರಿ: ವರದಕ್ಷಿಣೆ ಕಿರುಕುಳದ ಹಿನ್ನೆಲೆಯಲ್ಲಿ ತಲೆದಿಂಬಿನಿಂದ ಉಸಿರುಗಟ್ಟಿಸಿ ಗೃಹಿಣಿಯನ್ನು ಕೊಲೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಬಾಳಂಬೀಡ ಗ್ರಾಮದಲ್ಲಿ ನಡೆದಿದೆ.
ಮೃತ ಗೃಹಿಣಿಯನ್ನ ಸುಮಾ ಕೆರ್ನೆಲ್ಲಿ(23) ಎಂದು ಗುರುತಿಸಲಾಗಿದೆ. 2015ರಲ್ಲಿ ಮಾಲತೇಶ್ ಜೊತೆ ಸುಮಾಳ ಮದುವೆ ಆಗಿತ್ತು. ಮದುವೆ ನಂತರ ಪತಿ ಹಾಗೂ ಆತನ ಕುಟುಂಬದವರು ವರದಕ್ಷಿಣೆ ಕಿರುಕುಳ ನೀಡುತ್ತಿದ್ದರು ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.
Advertisement
Advertisement
ಸುಮಾಳ ಪತಿ ಮಾಲತೇಶ್ ವಿರುದ್ಧ ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಹಿರೇಕೆರೂರು ಪೊಲೀಸರು ಮಾಲತೇಶನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇತ್ತ ತಾಲೂಕು ಆಸ್ಪತ್ರೆಯ ಆವರಣದಲ್ಲಿ ಮೃತಳ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.
Advertisement
ಸದ್ಯ ಪತಿ ಹಾಗೂ ಆತನ ಸಂಬಂಧಿಕರಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಮೃತಳ ಸಂಬಂಧಿಕರು ಆಗ್ರಹಿಸಿದ್ದಾರೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv