ರಾಯಚೂರು: ನಗರದ ವಾಸವಿನಗರದಲ್ಲಿ (Vasavinagar) ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆಯಾಗಿದ್ದು, ಪತಿಯೇ ಕೊಲೆ ಮಾಡಿ ಬಳಿಕ ನೇಣು ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಪ್ರಸನ್ನ ಲಕ್ಷ್ಮೀ (35) ಮೃತ ಮಹಿಳೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
Advertisement
Advertisement
ಪತಿ ಜಂಬನಗೌಡ ಕುಡಿದು ಬಂದು ಡಿವೋರ್ಸ್‌ಗಾಗಿ ಪತ್ನಿ ಪ್ರಸನ್ನ ಲಕ್ಷ್ಮೀಯನ್ನು ನಿತ್ಯ ಪೀಡಿಸುತ್ತಿದ್ದ. ಮದುವೆಯಾಗಿ 16 ವರ್ಷಗಳ ಬಳಿಕ ಪತಿ ಡಿವೋರ್ಸ್‌ಗಾಗಿ ಪೀಡಿಸುತ್ತಿದ್ದ ಎಂಬ ಆರೋಪ ಕೇಳಿ ಬಂದಿದೆ. 14 ದಿನಗಳ ಹಿಂದೆಯಷ್ಟೇ ಮನೆ ಬದಲಾಯಿಸಿ ಪ್ರಸನ್ನ ಲಕ್ಷ್ಮೀ ಕುಟುಂಬ ಬಾಡಿಗೆ ಮನೆಯಲ್ಲಿದ್ದರು. ಕೌಟುಂಬಿಕ ಕಲಹದಿಂದ ಕಳೆದ 1 ವಾರದಿಂದ ಜಂಬನಗೌಡ ಕುಟುಂಬದಿಂದ ದೂರ ಉಳಿದಿದ್ದ. ಪತಿ ಕಿರುಕುಳ ವಿರುದ್ಧ ಪೊಲೀಸ್ ಠಾಣೆಯಲ್ಲಿ ಶನಿವಾರ ದೂರು ದಾಖಲಿಸಲು ಪ್ರಸನ್ನ ಲಕ್ಷ್ಮೀ ಮುಂದಾಗಿದ್ದರು. ರಾತ್ರಿ ವೇಳೆ ಮಕ್ಕಳು ಹೊರಗಡೆ ಹೋಗಿದ್ದಾಗ ಘಟನೆ ನಡೆದಿದೆ. ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಸನ್ನ ಲಕ್ಷ್ಮೀ ಶವ ಪತ್ತೆಯಾಗಿದ್ದು, ಪತಿ ಜಂಬನಗೌಡ ಪರಾರಿಯಾಗಿದ್ದಾನೆ. ಇದನ್ನೂ ಓದಿ: Champions Trophy Final: ಟೀಂ ಇಂಡಿಯಾ ಗೆಲುವಿಗಾಗಿ ಅಭಿಮಾನಿಗಳಿಂದ ದೇವರಿಗೆ ವಿಶೇಷ ಪೂಜೆ
Advertisement
Advertisement
ತಾಯಿ ಸಾವಿನಿಂದ ಇಬ್ಬರು ಮಕ್ಕಳು ತಬ್ಬಲಿಯಾಗಿದ್ದಾರೆ. ಗಂಡ, ಅತ್ತೆ, ಮಾವನ ಕಿರುಕುಳದಿಂದಲೇ ಘಟನೆ ನಡೆದಿದೆ ಎಂದು ಪ್ರಸನ್ನ ಲಕ್ಷ್ಮೀ ಕುಟುಂಬಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಲ್ಲಿ ಪ್ರೇಯಸಿ, ಆಕೆಯ ಮಗನನ್ನ ಹತ್ಯೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ
ರಾಯಚೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.