ರಿಯಾದ್/ಹೈದರಾಬಾದ್: ಸೌದಿ ಅರೇಬಿಯಾದ(Saudi Arabia) ರಾಜಧಾನಿ ರಿಯಾದ್‌ನಲ್ಲಿರುವ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಯೆಮೆನ್‌ನ ಹೌತಿ ಬಂಡುಕೋರರು ನಡೆಸಿದ ಕ್ಷಿಪಣಿ ದಾಳಿಯಲ್ಲಿ(Missile Attack) ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಹೈದರಾಬಾದ್‌ನ ಮೆಹದಿಪಟ್ನಂ ನಿವಾಸಿಯಾದ ಮೊಹಮ್ಮದ್ ಯೂಸುಫ್ ಅಲಿ ಶನಿವಾರ (ಅ. 10) ನಡೆದ ಮೊದಲ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಓರ್ವ ಪುತ್ರನಿಗೆ ಮೊಣಕಾಲು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು, ಮತ್ತೋರ್ವ ಪುತ್ರನ ಕಾಲಿನ ಮೂರು ಬೆರಳುಗಳು ಕತ್ತರಿಸಿಹೋಗಿವೆ. ಯೂಸುಫ್ ಅವರ ಪತ್ನಿ ಮತ್ತು ಪುತ್ರಿ ಸುರಕ್ಷಿತವಾಗಿದ್ದು, ಜೊತೆಯಲ್ಲಿದ್ದ ಚಿಕ್ಕಮ್ಮನ ತಲೆಗೆ ಪೆಟ್ಟಾಗಿದ್ದರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
UPDATE: It’s been confirmed that Yousuf sahab has passed away in the attack. Innalilahi wa inna ilahir rajioon. His son is undergoing knee surgery, another son is in the hospital and 3 of his toes have been cut off. His daughter and wife are safe. His aunt (chachi) was with them, and suffered injuries to the head but is out of danger. I am in touch with Yousuf’s brother in law in Riyadh and the DCM has assured me that they’re taking care. @DrSJaishankar every possible assistance should be provided to the family. The family is from Mehdipatnam in Hyderabad.
— Asaduddin Owaisi (@asadowaisi) October 11, 2026
ಎಐಎಂಐಎಂ (AIMIM) ಅಧ್ಯಕ್ಷ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ, ಹೈದರಾಬಾದಿನ ಮೊಹಮ್ಮದ್ ಯೂಸುಫ್ ಅಲಿ ಎಂಬುವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅವರ ಇಬ್ಬರು ಪುತ್ರರೂ ಸೇರಿದಂತೆ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ನಾನು ರಿಯಾದ್‌ನಲ್ಲಿರುವ ಯೂಸುಫ್ ಅವರ ಸಂಬಂಧಿಕರು ಹಾಗೂ ಭಾರತೀಯ ರಾಯಭಾರ ಕಚೇರಿಯ ಡೆಪ್ಯುಟಿ ಚೀಫ್ ಆಫ್ ಮಿಷನ್ (DCM) ಅವರೊಂದಿಗೆ ಮಾತನಾಡಿದ್ದೇನೆ. ಸಂಕಷ್ಟದಲ್ಲಿರುವ ಈ ಕುಟುಂಬಕ್ಕೆ ಸಾಧ್ಯವಿರುವ ಎಲ್ಲಾ ನೆರವು ಕಲ್ಪಿಸಬೇಕು ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಮನವಿ ಮಾಡುತ್ತೇನೆ ಎಂದು ಓವೈಸಿ ಎಕ್ಸ್‌ನಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ನಡುವೆ ‘ಇಂಧನ ಕದನ ವಿರಾಮ’ – ಟ್ರಂಪ್ ಮಹತ್ವದ ಘೋಷಣೆ
العربية تعرض لقطات من لحظات الاعتداء على مطار الرياض يوم أمس https://t.co/mQYJiki0m1
— العربية عاجل (@AlArabiya_Brk) October 11, 2026
ಸತತ ಎರಡನೇ ದಿನ ದಾಳಿ
ರಿಯಾದ್ ವಿಮಾನ ನಿಲ್ದಾಣದ ಮೇಲೆ ಸತತ ಎರಡು ದಿನಗಳಲ್ಲಿ ಎರಡು ಕ್ಷಿಪಣಿ ದಾಳಿಗಳು ನಡೆದಿವೆ. ಶನಿವಾರ ನಡೆದ ಮೊದಲ ದಾಳಿಯಲ್ಲಿ ಯೂಸುಫ್ ಅಲಿ ಸೇರಿದಂತೆ ಒಟ್ಟು 13 ಮಂದಿ ಸಾವನ್ನಪ್ಪಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಮೃತರ ಪೈಕಿ ನಾಲ್ವರು ಸೌದಿ ಪ್ರಜೆಗಳು ಹಾಗೂ ಬಾಂಗ್ಲಾದೇಶ, ಪ್ಯಾಲೆಸ್ತೀನ್, ಅಮೆರಿಕ, ಈಜಿಪ್ಟ್, ಜೋರ್ಡಾನ್, ಸಿರಿಯಾ ಮತ್ತು ಸುಡಾನ್ ದೇಶಗಳ ಪ್ರಜೆಗಳಿದ್ದಾರೆ.ಭಾನುವಾರ ವಿಮಾನ ನಿಲ್ದಾಣದ ಮೇಲೆ ಮತ್ತೆ ನಡೆದ ದಾಳಿಯಲ್ಲಿ ಪಾಕಿಸ್ತಾನ ಮೂಲದ ನಿವಾಸಿ ಮೃತಪಟ್ಟಿದ್ದು, 11 ಜನರು ಗಾಯಗೊಂಡಿದ್ದಾರೆ.
ಈ ಎರಡೂ ದಾಳಿಗಳ ಹೊಣೆಯನ್ನು ಯೆಮೆನ್‌ನ ಹೌತಿ ಬಂಡುಕೋರರು ಹೊತ್ತುಕೊಂಡಿದ್ದಾರೆ. ಯೆಮೆನ್ ಅಂತರ್ಯುದ್ಧದಲ್ಲಿ ಸೌದಿ ಅರೇಬಿಯಾ ಸರ್ಕಾರಿ ಪಡೆಗಳಿಗೆ ಬೆಂಬಲ ನೀಡುತ್ತಿರುವುದಕ್ಕೆ ಹಾಗೂ ಸನಾದಲ್ಲಿನ ವಿಮಾನ ನಿಲ್ದಾಣದ ಮೇಲಿನ ವೈಮಾನಿಕ ದಾಳಿಗೆ ಪ್ರತಿಯಾಗಿ ಈ ದಾಳಿ ನಡೆಸಿರುವುದಾಗಿ ಅವರು ಹೇಳಿದ್ದಾರೆ. ಅಲ್ಲದೆ, ಸೌದಿ ಅರೇಬಿಯಾದ ವಿಮಾನ ನಿಲ್ದಾಣಗಳು ಹಾಗೂ ವಾಯುಪ್ರದೇಶವನ್ನು ಬಳಸದಂತೆ ವಿಮಾನಯಾನ ಸಂಸ್ಥೆಗಳು ಮತ್ತು ಪ್ರಯಾಣಿಕರಿಗೆ ಎಚ್ಚರಿಕೆ ನೀಡಿದ್ದಾರೆ.

