ನವದೆಹಲಿ: 2016ರಲ್ಲಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಅನ್ನು ಈ ಹಿಂದೆ ಸೇನೆ ನಡೆಸಿದ ಯಾವುದೇ ಕಾರ್ಯಾಚರಣೆಗೆ ಹೋಲಿಸಲು ಸಾಧ್ಯವಿಲ್ಲ ಎಂದು ಸೇನೆಯ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಗಡಿ ನಿಯಂತ್ರಣ ರೇಖೆಯನ್ನು ದಾಟುವ ಪ್ರಕ್ರಿಯೆ ಸಾಮಾನ್ಯವಾಗಿ ನಡೆಯುತ್ತಲೇ ಇರುತ್ತದೆ. ಈ ಕುರಿತು ಅಷ್ಟಾಗಿ ವರದಿಯಾಗುವುದಿಲ್ಲ. ಅಂತಹ ದಾಳಿಗಳು ಬೆಟಾಲಿಯನ್, ದಳ ಅಥವಾ ವಿಭಾಗೀಯ ಮಟ್ಟದಲ್ಲಿ ನಡೆಯುತ್ತವೆ. ಆದರೆ 2016ರಲ್ಲಿ ನಡೆದ ನಿರ್ಧಿಷ್ಟ ದಾಳಿಯ ಯೋಜನೆ ದೊಡ್ಡ ಮಟ್ಟದಲ್ಲಿತ್ತು ಎಂದು ಅಧಿಕಾರಿ ತಿಳಿಸಿದ್ದಾರೆ.
Advertisement
Advertisement
ಸೇನಾ ಮುಖ್ಯಸ್ಥರು ಮತ್ತು ಪ್ರಧಾನಮಂತ್ರಿ ಕಾರ್ಯಾಲಯದ ಅಧಿಕಾರಿಗಳು ಒಟ್ಟಾಗಿ 2016ರ ಸರ್ಜಿಕಲ್ ಸ್ಟ್ರೈಕ್ ಯೋಜನೆ ರೂಪಿಸಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸರ್ಜಿಕಲ್ ಸ್ಟ್ರೈಕ್ ನೇತೃತ್ವವನ್ನು ವಹಿಸಿದ್ದ ಲೆಫ್ಟಿನೆಂಟ್ ಜನರಲ್ ಡಿಎಸ್ ಹೂಡಾ ಪ್ರತಿಕ್ರಿಯಿಸಿ, ಈ ಹಿಂದೆ ಗಡಿ ನಿಯಂತ್ರಣ ರೇಖೆಯನ್ನು ದಾಟುವುದು ಸೇನೆಯಲ್ಲಿ ಸಾಮಾನ್ಯವಾಗಿರುತ್ತದೆ. ಆದರೆ 2016ರ ನಿರ್ಧಿಷ್ಟ ದಾಳಿಯ ಮಹತ್ವದ ನಿರ್ಧಾರವನ್ನು ರಾಜಕೀಯ ನಾಯಕರು ಕೈಗೊಂಡಿದ್ದರು. ಈ ದಾಳಿ ಈ ಹಿಂದೆ ನಡೆದ ದಾಳಿಗಿಂತ ಭಿನ್ನವಾಗಿದೆ ಎಂದು ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ.
Advertisement
ಕಾಂಗ್ರೆಸ್ ರಾಷ್ಟ್ರೀಯ ಭದ್ರತಾ ಕಾರ್ಯಪಡೆಯ ನೇತೃತ್ವವನ್ನು ಡಿಎಸ್ ಹೂಡಾ ವಹಿಸಿಕೊಂಡಿದ್ದು, ಈ ಸಂಬಂಧ ತಮ್ಮ ವರದಿಯನ್ನು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ನೀಡಿತ್ತು.
Advertisement
ಕಾಂಗ್ರೆಸ್ ಹೇಳಿದ್ದೇನು?:
ಸುದ್ದಿಗೋಷ್ಠಿ ನಡೆಸಿ ಗುರುವಾರ ಮಾತನಾಡಿದ್ದ ಕಾಂಗ್ರೆಸ್ ಸಂಸದ ರಾಜೀವ್ ಶುಕ್ಲಾ ಅವರು, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ನಡೆಸಿದ 6 ಸರ್ಜಿಕಲ್ ಸ್ಟ್ರೈಕ್ ನಡೆದಿದೆ. ಈ ಮೂಲಕ ನಮ್ಮ ಸರ್ಕಾರದ ಕಾಲದಲ್ಲೂ ಉಗ್ರರ ಮಾರಣಹೋಮ ಮಾಡಿದ್ದೇವೆ ಎಂದು ಹೇಳಿದ್ದರು.
ನಮ್ಮ ಪಕ್ಷದ ಆಧಿಕಾರದ ಅವಧಿಯಲ್ಲೂ ಸರ್ಜಿಕಲ್ ಸ್ಟ್ರೈಕ್ ಆಗಿವೆ ಅದರೆ ನಾವು ಅದನ್ನು ರಾಜಕೀಯವಾಗಿ ಪ್ರಚಾರಕ್ಕೆ ಬಳಸಿಕೊಂಡಿಲ್ಲ. ಆದರೆ ಪ್ರಧಾನಿ ಮೋದಿ ಅವರ ಸರ್ಕಾರವು ಸೈನ್ಯದ ಶೌರ್ಯವನ್ನು ರಾಜಕೀಯ ಲಾಭಕ್ಕೆ ಬಳಸಿಕೊಂಡಿದೆ ಎಂದು ದೂರಿದ್ದರು. 2008 ರಿಂದ 2014ರ ವರೆಗೆ ನಡೆದಿರುವ 6 ಸರ್ಜಿಕಲ್ ಸ್ಟ್ರೈಕ್‍ಗಳ ವಿವರಗಳನ್ನು ಚಿತ್ರಗಳ ಸಮೇತ ಮಾಧ್ಯಮಗಳ ಮುಂದೆ ರಾಜೀವ್ ಶುಕ್ಲಾ ಬಿಡುಗಡೆ ಮಾಡಿದ್ದರು.
ಈ ಹಿಂದೆ ವ್ಯಕ್ತಿಯೊಬ್ಬರು ಡೈರೆಕ್ಟರ್ ಜನರಲ್ ಆಫ್ ಮಿಲಿಟರಿ ಆಪರೇಷನ್(ಡಿಜಿಎಂಒ)ಗೆ ಮಾಹಿತಿ ಹಕ್ಕಿನ ಅಡಿ ಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆದಿರುವ ಬಗ್ಗೆ ಮಾಹಿತಿ ಕೊಡಿ ಎಂದು ಕೇಳಿಕೊಂಡಿದ್ದರು. ಈ ಪ್ರಶ್ನೆಗೆ ಡಿಜಿಎಂಒ, ಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆದಿದೆ ಎನ್ನುವುದಕ್ಕೆ ನಮ್ಮ ವಿಭಾಗದಲ್ಲಿ ಯಾವುದೇ ದಾಖಲೆಗಳು ಇಲ್ಲ ಎಂದು ಉತ್ತರ ನೀಡಿತ್ತು.
2016ರ ಸೆಪ್ಟೆಂಬರ್ 29 ರಂದು ಡಿಜಿಎಂಒ ಸುದ್ದಿಗೋಷ್ಠಿ ನಡೆಸಿ ಭಾರತದ ಸೇನೆಯ ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಜಿಕಲ್ ಸ್ಟ್ರೈಕ್ ನಡೆದಿದೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಆಧಾರವಾಗಿರಿಸಿ ವ್ಯಕ್ತಿಯೊಬ್ಬರು ಮಾಹಿತಿ ಹಕ್ಕಿನ ಅಡಿ ಈ ಹಿಂದೆ ಸರ್ಜಿಕಲ್ ಸ್ಟ್ರೈಕ್ ನಡೆದಿರುವ ಬಗ್ಗೆ ಮಾಹಿತಿ ನೀಡಿ ಎಂದು ಕೇಳಿದ್ದರು.